ಚೆನ್ನೈ: ಕಾಲೇಜಿನಲ್ಲಿ ಓದುತ್ತ ಅರೆಕಾಲಿಕ ಅಡುಗೆ ಭಟ್ಟನಾಗಿ ಕಾರ್ಯನಿರ್ವಹಿಸುತ್ತಿದ್ದ ಯುವಕನೊಬ್ಬ ರಸಮ್ ಪಾತ್ರೆಯೊಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಮದುವೆ ಮನೆಯೊಂದರಲ್ಲಿ ಈ ಘಟನೆ ನಡೆದಿದ್ದು, ಚೈನ್ನೈ ಹತ್ತಿರದ ತಿರುವಳ್ಳೂರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. 21 ವರ್ಷದ ಯುವಕ ಸುಟ್ಟ ಗಾಯಗಳಿಂದ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಸಾವನ್ನಪ್ಪಿದ ಯುವಕ ಇನ್ನೂ ಕಾಲೇಜಿನಲ್ಲಿ ಓದುತ್ತಿದ್ದ ಎನ್ನಲಾಗಿದೆ.
ಈ ಯುವಕ ಅಡುಗೆ ಕೆಲಸಕ್ಕೆಂದು ಅರೆಕಾಲಿಕ ಕೆಲಸಗಾರನಾಗಿದ್ದ. ಮದುವೆ ಸಮಾರಂಭದಲ್ಲಿ ಊಟ ಬಡಿಸುತ್ತಿದ್ದ. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ರಸಂ ಪಾತ್ರೆಯೊಳಗೆ ಬಿದ್ದು ಸಾವನ್ನಪ್ಪಿದ್ದಾರೆ.

ತೀವ್ರ ಸುಟ್ಟಗಾಯಗಳಾಗಿರುವ ಸಂತ್ರಸ್ತನನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನ್ನಪ್ಪಿದ್ದಾನೆ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.