Kornersite

Crime Just In National Uttar Pradesh

Crime News: ಪಬ್ ಜಿ ಆಡಬೇಡ ಎಂದಿದ್ದ ತಾಯಿ ಕೊಲೆ ಮಾಡಿದ್ದ ಆರೋಪ ಹೊತ್ತಿದ್ದ ಮಗನಿಗೆ ಜಾಮೀನು!

ಲಕ್ನೋ: ಪಬ್ ಜಿ ಆಡಬೇಡ ಎಂದು ಬುದ್ಧಿ ಹೇಳಿದ್ದಕ್ಕೆ ತಾಯಿಯನ್ನೇ ಕೊಲೆ ಮಾಡಿದ್ದ ಅಪ್ರಾಪ್ತ ಮಗನಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ತಂದೆಯ ಲೈಸೆನ್ಸ್ ಹೊಂದಿದ್ದ ಪಿಸ್ತೂಲ್ (Pistol) ಬಳಸಿ ತಾಯಿ ಅಪ್ರಾಪ್ತ ಮಗ ಕೊಲೆ ಮಾಡಿದ್ದ. ಸದ್ಯ ಆರೋಪಿಗೆ ಅಲಹಾಬಾದ್ ಹೈಕೋರ್ಟ್ (Allahabad High Court) ಜಾಮೀನು (Bail) ಮಂಜೂರು ಮಾಡಿದೆ. ಆರೋಪಿಯು ಅಪ್ರಾಪ್ತನಾಗಿದ್ದು, ಘಟನೆಗೆ ಪ್ರತ್ಯಕ್ಷ ಸಾಕ್ಷಿಗಳಿಲ್ಲ ಎಂದು ಪರಿಗಣಿಸಿದ ನ್ಯಾಯಮೂರ್ತಿ ಪ್ರಕಾಶ್ ಸಿಂಗ್ ಅವರಿದ್ದ ಏಕ ಸದಸ್ಯ ಪೀಠ ಜಾಮೀನು ನೀಡಿದೆ. ಯಾವ ಸಾಕ್ಷಿಗಳೂ ಸೂಕ್ತವಾಗಿಲ್ಲ. ಪ್ರಕರಣದಲ್ಲಿ ಆರೋಪಿಯ ಅಜ್ಜಿ ದೂರು ದಾಖಲಿಸಿದ್ದು, ಅವರು ಪ್ರತ್ಯಕ್ಷ ಸಾಕ್ಷಿಯಲ್ಲ. ಹಲವು ಸಾಕ್ಷಿಗಳು ಪ್ರತ್ಯಕ್ಷ ಸಾಕ್ಷಿಗಳಾಗಿಲ್ಲ. ಕೇವಲ ಆರೋಪಿ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ಅಲ್ಲದೆ ಆರೋಪಿಗೆ ಘಟನೆ ನಡೆದಾಗ 16 ವರ್ಷ.

ಇದು ಬಾಲ ನ್ಯಾಯ ಮಂಡಳಿಯ ದೋಷಾರೋಪ ಪಟ್ಟಿಯಲ್ಲಿಯೂ ಸ್ಪಷ್ಟವಾಗಿದೆ. ಇದರಿಂದಾಗಿ ಆತನನ್ನು ಅಪ್ರಾಪ್ತ ಎಂದು ಪರಿಗಣಿಸಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ. ಆರೋಪಿಯು ಜಾಮೀನಿಗಾಗಿ ಜಿಲ್ಲಾ ನ್ಯಾಯಲಯದ ಮೊರೆ ಹೋಗಿದ್ದ. ಆದರೆ ಜಿಲ್ಲಾ ನ್ಯಾಯಾಲಯ ಜಾಮೀನು ನಿರಾಕರಿಸಿತ್ತು. ಲಕ್ನೋದ (Lucknow) ಪೋಕ್ಸೊ ನ್ಯಾಯಾಲಯದ (POCSO Court) ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ (Additional District & Sessions Court) ತೀರ್ಪಿನ ವಿರುದ್ಧ ಹೈಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿದ್ದ. 2022 ರಲ್ಲಿ ಪಬ್‍ಜಿ ಆಡುವುದನ್ನು ತಡೆದ ಕಾರಣಕ್ಕಾಗಿ ಆರೋಪಿಯು ತಾಯಿಯನ್ನು ಕೊಲೆ ಮಾಡಿದ್ದಾನೆ ಎಂಬ ಆರೋಪ ಇತ್ತು. ಘಟನೆ ನಡೆದ ಎರಡು ದಿನಗಳ ನಂತರ ಮೃತರ ಶವ ಪತ್ತೆಯಾಗಿತ್ತು ಎಂದು ಮಾಧ್ಯಮಗಳು ವರದಿ ಮಾಡಿದ್ದವು. ತಂದೆ ತನ್ನ ಮಗನ ಮೇಲೆ ನಿಗಾ ಇಡುತ್ತಾರೆ ಎಂಬ ಅಂಶವನ್ನು ಸಹ ನ್ಯಾಯಾಲಯ ಉಲ್ಲೇಖಿಸಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ