ಬೆಂಗಳೂರು : ಕಳೆದ ಒಂದು ವಾರದಿಂದ ಚಿನ್ನ ಹಾಗೂ ಬೆಳ್ಳಿಯ ಬೆಲೆಯಲ್ಲಿ ಸಮಾಧಾನಕರ ಸುದ್ದಿ ಇದೆ.
ಭಾರತ ಹಾಗೂ ವಿದೇಶಗಳ ಚಿನಿವಾರ ಮಾರುಕಟ್ಟೆಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಅಷ್ಟೊಂದು ಏರಿಳಿತಗಳಾಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 55,850 ರೂ. ಇದೆ. 24 ಕ್ಯಾರಟ್ ನ ಅಪರಂಜಿ ಚಿನ್ನದ ಬೆಲೆ 60,930 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 7,620 ರೂ. ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 55,900 ರೂ. ಇದೆ. ಬೆಳ್ಳಿ ಬೆಲೆ 100 ಗ್ರಾಂಗೆ 8,040 ರೂ. ಇದೆ.
ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆ ಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ.
ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 1ಕ್ಕೆ):
22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ: 55,850 ರೂ
24 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ: 60,930 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 762 ರೂ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಂಗೆ)
ಬೆಂಗಳೂರು: 55,900 ರೂ
ಚೆನ್ನೈ: 56,330 ರೂ
ಮುಂಬೈ: 55,850 ರೂ
ದೆಹಲಿ: 56,000 ರೂ
ಕೋಲ್ಕತಾ: 55,850 ರೂ
ಕೇರಳ: 55,850 ರೂ
ಅಹ್ಮದಾಬಾದ್: 55,900 ರೂ
ಜೈಪುರ್: 56,000 ರೂ
ಲಕ್ನೋ: 56,000 ರೂ
ಭುವನೇಶ್ವರ್: 55,850 ರೂ