Kornersite

National

GST: ದೇಶದಲ್ಲಿ ಐತಿಹಾಸಿಕ ದಾಖಲೆಯ ಜಿಎಸ್ ಟಿ ಸಂಗ್ರಹ!

New Delhi : ಈ ಬಾರಿ ದೇಶದಲ್ಲಿ ಏಪ್ರಿಲ್‌ ತಿಂಗಳಿನಲ್ಲಿ ದಾಖಲೆಯ 1.87 ಲಕ್ಷ ಕೋಟಿ ಜಿಎಸ್‌ ಟಿ (GST) ಸಂಗ್ರಹವಾಗಿದ್ದು, ದೇಶದಲ್ಲಿ ಜಾರಿಯಾದ ನಂತರ ಇದೇ ಮೊದಲ ಬಾರಿಗೆ ಅತೀ ಹೆಚ್ಚು ಜಿಎಸ್‌ ಟಿ ಸಂಗ್ರಹವಾಗಿದೆ ಎಂದು ಕೇಂದ್ರೀಯ ಹಣಕಾಸು ಸಚಿವಾಲಯ (Ministry of Finance) ಹೇಳಿದೆ.

ಕಳೆದ ವರ್ಷ ಏಪ್ರಿಲ್‌ನಲ್ಲಿ 1.68 ಲಕ್ಷ ಕೋಟಿ ಜಿಎಸ್‌ ಟಿ ಸಂಗ್ರಹವಾಗಿದ್ದು, ಇಲ್ಲಿಯವರೆಗೆ ದಾಖಲೆಯಾಗಿತ್ತು. ನಂತರ ಕಳೆದ ವರ್ಷದ ಅಕ್ಟೋಬರ್‌ ತಿಂಗಳಲ್ಲಿ 1.48 ಲಕ್ಷ ಕೋಟಿ ತೆರಿಗೆ ಸಂಗ್ರಹವಾಗಿತ್ತು. ಆದರೆ, 2023ರ ಕಳೆದ ಏಪ್ರಿಲ್‌ ತಿಂಗಳಲ್ಲಿ 1.87 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದೆ. ಇದು ಹಿಂದೆಂಗಿತಲೂ ಅತ್ಯಧಿಕ 19,495 ಕೋಟಿ ರೂ. ಅಂದರೆ ಶೇ. 12 ರಷ್ಟು ಹೆಚ್ಚಾಗಿದೆ ಎಂದು ಸರ್ಕಾರ ಹೇಳಿದೆ.

ಏಪ್ರಿಲ್‌ 20 ರಂದು ಒಂದೇ ದಿನದಲ್ಲಿ 68,228 ಕೋಟಿ ರೂ. ಸಂಗ್ರಹವಾಗಿದೆ. ಇದು ಇಲ್ಲಿಯವರೆಗೆ ಒಂದೇ ದಿನದಲ್ಲಿ ಸಂಗ್ರಹವಾದ ಅತಿಹೆಚ್ಚು ಜಿಎಸ್‌ಟಿ ಪ್ರಮಾಣವಾಗಿದೆ. ಕರ್ನಾಟಕದಲ್ಲಿ (Karnataka) ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ.23 ರಷ್ಟು ಜಿಎಸ್‌ಟಿ ಸಂಗ್ರಹದಲ್ಲಿ ಏರಿಕೆಯಾಗಿದೆ. 14,593 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದೆ. ಕಳೆದ ವರ್ಷ ಏಪ್ರಿಲ್‌ನಲ್ಲಿ 11,820 ಕೋಟಿ ರೂ. ಸಂಗ್ರಹವಾಗಿತ್ತು.

ಈ ಬಾರಿಯೂ ಮಹಾರಾಷ್ಟ್ರದಲ್ಲಿ (Maharashtra) ಅತ್ಯಂತ ಹೆಚ್ಚಿನ ಜಿಎಸ್‌ಟಿ ಸಂಗ್ರಹವಾಗಿದೆ. ಕಳೆದ ವರ್ಷ 27,495 ಕೋಟಿ ರೂ. ಸಂಗ್ರಹವಾಗಿದ್ದ ಮಹಾರಾಷ್ಟ್ರಕ್ಕೆ 33,196 ಕೋಟಿ ಜಿಎಸ್‌ಟಿ ಬಂದಿದೆ. ಕಳೆದ ವರ್ಷಕ್ಕಿಂತ ಶೇ.21 ರಷ್ಟು ಹೆಚ್ಚಾಗಿದೆ. ಗುಜರಾತ್ (Gujarat) 11,721 ಕೋಟಿ ರೂ., ತಮಿಳುನಾಡು (Tamil Nadu) 11,559 ಕೋಟಿ ರೂ., ಪಶ್ಚಿಮ ಬಂಗಾಳ (West Bengal) 6,447 ಕೋಟಿ ರೂ., ಹರ್ಯಾಣ 10,035 ಕೋಟಿ ರೂ., ಉತ್ತರಪ್ರದೇಶ 10,320 ಕೋಟಿ ರೂ. ಹಾಗೂ ಹಾಗೂ ತೆಲಂಗಾಣ 5,622 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದೆ.

You may also like

National

ರಾಮಲೀಲಾ ಮೈದಾನದಲ್ಲಿ ಜಮಾಯಿಸುತ್ತಿರುವ ರೈತರು

ನವದೆಹಲಿ : ದೇಶದ ಬೇರೆ ಬೇರೆ ರಾಜ್ಯಗಳಿಂದ ರೈತರು ಇಂದು ದೆಹಲಿಯಲ್ಲಿ ಜಮಾಯಿಸುತ್ತಿದ್ದಾರೆ. ವಿವಿಧ ರೈತ ಸಂಘಟನೆಗಳ ಯುನೈಟೆಡ್ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕೃಷಿ ಉತ್ಪನ್ನಗಳ ಕನಿಷ್ಠ
Just In National

Politics ಆಂಧ್ರಪ್ರದೇಶದ ಮಾಜಿ ಸಿಎಂ ಬಿಜೆಪಿ ಸೇರ್ಪಡೆ

ನವದೆಹಲಿ : ಆಂಧ್ರದ (Andhra Pradesh) ಮಾಜಿ ಸಿಎಂ (Former Chief Minister) ಕಿರಣ್ ಕುಮಾರ್ ರೆಡ್ಡಿ (Kiran Kumar Reddy) ಅವರು ಬಿಜೆಪಿ (BJP) ಸೇರಿದ್ದಾರೆ.ಅವಿಭಜಿತ