Bangalore : ರಾಜ್ಯ ವಿಧಾನಸಭೆ ಚುನಾವಣೆ (Karmnataka Assembly Elections 203) ಕಾವು ರಂಗೇರಿದ್ದು, ಮತದಾರರನ್ನು ಸೆಳೆಯಲು ಎಲ್ಲ ಪಕ್ಷಗಳು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಒಂದಕ್ಕಿಂತ ಒಂದು ಪಕ್ಷ ಗ್ಯಾರಂಟಿ, ಭರವಸೆ ನೀಡುತ್ತ ಮತದಾರರನ್ನು ಸೆಳೆಯುತ್ತಿವೆ. ಇಂದು ಬಿಜೆಪಿಯ ಪ್ರಣಾಳಿಕೆ ಕೂಡ ಬಿಡುಗಡೆಯಾಗಲಿದೆ.

ಸದ್ಯ 5 ಗ್ಯಾರಂಟಿ ಬಿಡುಗಡೆ ಮಾಡಿದ್ದು, ಈಗ 6ನೇ ಗ್ಯಾರಂಟಿ ಬಿಡುಗಡೆ ಮಾಡಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 15 ಸಾವಿರ ರೂ., ಆಶಾ ಕಾರ್ಯಕರ್ತೆಯರಿಗೆ 8 ಸಾವಿರ ರೂ. ಹಾಗೂ ಬಿಸಿಯೂಟ ನೌಕರರಿಗೆ 5 ಸಾವಿರ ರೂ. ವೇತನ ನೀಡುವುದಾಗಿ ಘೋಷಿಸಿದೆ. ಬೆಳಗಾವಿಯಲ್ಲಿ ಕ್ರಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಈ ಗ್ಯಾರಂಟಿಯನ್ನು ಘೋಷಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಲಿ 11,500ರೂ.ಗಳಿಂದ 15,000 ಸಾವಿರ ರೂ., ಸಹಾಯಕಿಯರಿಗೆ ಹಾಲಿ 7,500 ರೂ.ದಿಂದ 10,000 ಸಾವಿರ ರೂ., ಆಶಾ ಕಾರ್ಯಕರ್ತೆಯರಿಗೆ ಈಗ ಇರುವ 5,000 ರೂ.ಗಳಿಂದ 8,000 ರೂ. ಹಾಗೂ ಬಿಸಿಯೂಟ ಅಡುಗೆ ಕಾರ್ಯಕರ್ತೆಯರಿಗೆ ಹಾಲಿ 3,700 ರೂ.ದಿಂದ 5,000 ರೂ.ಗಳಿಗೆ ಗೌರವಧನ ಪರಿಷ್ಕರಣೆ ಮಾಡುವುದಾಗಿ ತಿಳಿಸಿದ್ದಾರೆ.

ಪ್ರತಿ ಮನೆಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್, ಪದವೀಧರರಿಗೆ ಮಾಸಿಕ 3 ಸಾವಿರ ರೂ, ನಿರುದ್ಯೋಗ ಭತ್ಯೆ, ಗೃಹಿಣಿಯರಿಗೆ ಮಾಸಿಕ 2 ಸಾವಿರ ರೂ. ಸಹಾಯಧನ, ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇರಿದಂತೆ ಕಾಂಗ್ರೆಸ್ ಈಗಾಗಲೇ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಸದ್ಯ 6ನೇ ಗ್ಯಾರಂಟಿ ಘೋಷಿಸಿದ್ದು, ಅಧಿಕಾರಕ್ಕೆ ಬಂದರೆ, ಈ ಭರವಸೆ ಈಡೇರಿಸುವುದಾಗಿ ತಿಳಿಸಿದೆ.