Kalaburagi : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ(Mallikarjun Kharge) ಪ್ರಿಯಾಂಕ್ ಖರ್ಗೆ(Priyank Kharge) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ನಾಲಾಯಕ್ ಎಂದು ಕರೆದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು, ಸೇಡಂ ಮಳಖೇಡಕ್ಕೆ ಬಂದ ಸಂದರ್ಭದಲ್ಲಿ ಬಂಜಾರಾ (Banjara) ಸಮಾಜದವರಿಗೆ ಈ ಸಮಾಜದ ಮಗ ದೆಹಲಿಯಲ್ಲಿದ್ದಾನೆ ಎಂದು ಹೇಳಿದ್ದರು. ಆದರೆ ಈಗ ಬಂಜಾರಾ ಸಮುದಾಯದವರಿಗೆ ಮೀಸಲಾತಿಯಲ್ಲಿ ಅನ್ಯಾಯ ಮಾಡಲಾಗಿದೆ. ನಿಮ್ಮ ಸಮಾಜದಲ್ಲಿ ಇಂತಹ ನಾಲಾಯಕ್ ಮಗನಿದ್ದರೆ ಹೇಗೆ ನಡೆಯುತ್ತೆ ಎಂದು ಕಿಡಿಕಾರಿದ್ದಾರೆ.
ದೇಶ ನಡೆಸುವುದು ಮಾತ್ರವಲ್ಲ. ಮನೆಯಲ್ಲಿ ಒಬ್ಬ ನಾಲಾಯಕ್ ಮಗನಿದ್ದರೂ ಮನೆ ಸುಸೂತ್ರವಾಗಿ ನಡೆಯುವುದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಮೋದಿ ಅವರು 91 ಬಾರಿ ಕಾಂಗ್ರೆಸ್ ನಿಂದಿಸಿದ ಕುರಿತು ಸಮಯವಿದೆ. ಆದರೆ ಗುತ್ತಿಗೆದಾರರ ಸಂಘ, ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ, ಗೂಳಿಹಟ್ಟಿ ಶೇಖರ್ ಅವರ ಪತ್ರದ ಬಗ್ಗೆ ಉತ್ತರ ನೀಡಿಲ್ಲ. ಬಿಜೆಪಿಯ ಶಾಸಕ ವಿರೂಪಾಕ್ಷಪ್ಪ ಮನೆಯಲ್ಲಿ ಕೋಟಿ ಕೋಟಿ ಹಣ ಸಿಕ್ಕಿದೆ. ಬಿಜೆಪಿ ಭ್ರಷ್ಟಾಚಾರ ಕುರಿತು ಮಾತನಾಡಬೇಕು ಎಂದು ಒತ್ತಾಯಿಸಿದರು.