ನಾನು ಜಾತಿ(Caste)ಯ ಪರವಾಗಿ ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದೇನೆ ಅಂದುಕೊಳ್ಳಬೇಡಿ ಎಂದು ನಟ, ಕಿಚ್ಚ ಸುದೀಪ್ (Sudeep) ಮನವಿ ಮಾಡಿದ್ದಾರೆ.

ಯಮಕನಮರಡಿ (Yamakanamaradi) ವಿಧಾನಸಭಾ ಕ್ಷೇತ್ರದ ವಂಟಮೂರಿ ಗ್ರಾಮದಲ್ಲಿ ರೋಡ್ ಶೋ ನಂತರ ಮಾತನಾಡಿದ ಅವರು, ನಮ್ಮದು ಯಾವ ಜನಾಂಗ. ನಾನು ಎಲ್ಲಿ ಹುಟ್ಟಿದೆ ಎನ್ನುವುದು ಮುಖ್ಯವಲ್ಲ. ಮನುಷ್ಯನಾಗಿರುವುದು, ಸ್ನೇಹಿತನಾಗಿರುವುದು ಮುಖ್ಯ. ಆಗ ಮಾತ್ರ ನಾವು ಎಲ್ಲ ಮನಸ್ಸುಗಳನ್ನು ಗೆಲ್ಲಲು ಸಾಧ್ಯವಾಗುತ್ತದೆ. ನಾನು ನಿಮ್ಮ ಸಹೋದರ, ಸ್ನೇಹಿತನಾಗಿ ಬಂದಿದ್ದೇನೆ. ನನ್ನ ಬಾಂಧವರ ಪರ ತುಂಬಾ ಪ್ರೀತಿ ಇದೆ’ ಎಂದು ಹೇಳಿದ್ದಾರೆ.

ಯಮಕನಮರಡಿ ಅಭ್ಯರ್ಥಿ ಬಸವರಾಜ ಹುಂದ್ರಿ ಅವರು ಬಡತನದಿಂದ ಬಂದವರು. ಅವರ ಜನಸೇವೆ ಗುರುತಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಟಿಕೆಟ್ ನೀಡಿದ್ದಾರೆ. ನಿಮ್ಮ ಸಹಕಾರ ಹಾಗೂ ಸೇವೆ ಮಾಡಲು ಬಸವರಾಜ ಹುಂದ್ರಿ ಅವರಿಗೆ ಅವಕಾಶ ಕೊಡಿ. ಮತ ಹಾಕಿ ಗೆಲ್ಲಿಸುವದು ಅಷ್ಟೆ ಅಲ್ಲ ಅವರ ಕಡೆಯಿಂದ ಕೆಲಸ ಮಾಡಿಸಿಕೊಳ್ಳುವುದು ಮುಖ್ಯ. ಈ ಕ್ಷೇತ್ರದಲ್ಲಿ ಸರಿಯಾದ ರಸ್ತೆಗಳಿಲ್ಲ. ಈ ಕ್ಷೇತ್ರದಲ್ಲಿ ಸಾಕಷ್ಟು ಕೆಲಸಗಳು ಆಗಬೇಕಿದೆ ಎಂದು ಹೇಳಿದ್ದಾರೆ.