Bangalore : ಕಾಂಗ್ರೆಸ್ (Congress) ಮುಖಂಡೆ, ಮಾಜಿ ಸಂಸದೆ, ನಟಿ ರಮ್ಯಾ (Ramya) ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಹಲವು ಅಭ್ಯರ್ಥಿಗಳ ಪರ ಮತಯಾಚನೆ ನಡೆಸಲಿದ್ದಾರೆ.
ಚುನಾವಣೆ (Election)ಯ ಹಿನ್ನೆಲೆಯಲ್ಲಿ ಈಗಾಗಲೇ ಎಲ್ಲ ಪಕ್ಷಗಳು ಸ್ಟಾರ್ ಪ್ರಚಾರಕರನ್ನು ಕರೆ ತಂದು ಪ್ರಚಾರ ಮಾಡುತ್ತಿವೆ. ನಟಿ ರಮ್ಯಾ ಕಾಂಗ್ರೆಸ್ ಸ್ಟಾರ್ ಪ್ರಚಾರಕಿಯಾಗಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ಮೇ 4ರಂದು ರಮ್ಯಾ ವರುಣಾ (Varuna) ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಪರ ಪ್ರಚಾರ ನಡೆಸಲಿದ್ದಾರೆ.
ಮೇ 6ರಂದು ಬಬಲೇಶ್ವರ (Babaleshwar) ಕ್ಷೇತ್ರದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ (M.B.Patil) ಪರ ಪ್ರಚಾರ ನಡೆಸಲಿದ್ದಾರೆ. ಬೆಂಗಳೂರಿನ (Bengaluru) ಸರ್ವಜ್ಞ ನಗರದಲ್ಲಿ (Sarvagnanagar) ಕೆ.ಜೆ.ಜಾರ್ಜ್ (K.J.George) ಪರ ಪ್ರಚಾರ ನಡೆಸಿ ಮತಯಾಚನೆ ಮಾಡಲಿದ್ದಾರೆ. ಮಂಡ್ಯ (Mandya) ಜಿಲ್ಲೆಯಲ್ಲಿ ಕೂಡ ಪ್ರಚಾರ ನಡೆಸಲಿದ್ದಾರೆ.