Kornersite

Bengaluru Just In Karnataka Politics State

Karnataka Assembly Election: ಖರ್ಗೆ ಕೋಟೆಯಲ್ಲಿ ರೋಡ್ ಶೋ ನಡೆಸಿ, ಆರ್ಭಟಿಸಲಿರುವ ಮೋದಿ!

Kalaburagi : ರಾಜ್ಯ ಚುನಾವಣೆಗೆ ಕೇವಲ 8 ದಿನಗಳು ಮಾತ್ರ ಬಾಕಿ ಇವೆ. ಹೀಗಾಗಿ ಎಲ್ಲ ಪಕ್ಷಗಳು ಕಾಲಿಗೆ ಚಕ್ರ ಕಟ್ಟಿಕೊಂಡು ಭರ್ಜರಿ ಪ್ರಚಾರ ಕೈಗೊಳ್ಳುತ್ತಿವೆ. ಪ್ರಧಾನಿ ಮೋದಿ ಆದಿಯಾಗಿ ಎಲ್ಲ ಪಕ್ಷಗಳ ಹೈಕಮಾಂಡ್ ಕೂಡ ಕರ್ನಾಟಕದಲ್ಲಿಯೇ ಬೀಡು ಬಿಟ್ಟಿದ್ದಾರೆ.

ಇಂದು ಕಲಬುರಗಿ (Kalaburagi) ಜಿಲ್ಲೆಗೆ ಪ್ರಧಾನಿ ಮೋದಿ (PM Narendra Modi) ಎಂಟ್ರಿ ಕೊಡಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಪ್ರಭಾವ ಇರುವ ಕಲ್ಯಾಣ ಕರ್ನಾಟಕದಲ್ಲಿ ಮೋದಿ ಪ್ರಚಾರದ ಮೂಲಕ ಧೂಳೆಬ್ಬಿಸಲು ಬಿಜೆಪಿ ಮುಂದಾಗಿದೆ.
ರೋಡ್ ಶೋ ವೇಳೆ ಖರ್ಗೆಗೆ ಮತ್ತೆ ಕೌಂಟರ್ ಕೊಡಲು ಮೋದಿ ಪ್ಲಾನ್ ರಚಿಸಿದ್ದು, ಮತ್ತೊಮ್ಮೆ ವಿಷಸರ್ಪ ಹೇಳಿಕೆಗೆ ಮೋದಿಯಿಂದ ತಿರುಗೇಟು ನಿರೀಕ್ಷೆ ಇದೆ. ಕಲ್ಯಾಣ ಕರ್ನಾಟಕದಲ್ಲಿ ಗರಿಷ್ಠ ಕ್ಷೇತ್ರಗಳನ್ನು ವಶಕ್ಕೆ ಪಡೆಯಲು ಬಿಜೆಪಿ ಪಣ ತೊಟ್ಟಿದೆ. ಈ ಭಾಗದಲ್ಲಿ ಲಿಂಗಾಯತರ ಪ್ರಾಭಲ್ಯದ ಎಸ್ಸಿ, ಎಸ್ಟಿ ಸೇರಿದಂತೆ ಹಿಂದುಳಿದ ವರ್ಗಗಳ ಅಹಿಂದ ಮತಗಳು ನಿರ್ಣಾಯಕವಾಗಲಿದೆ.

ಕಲಬುರಗಿ ಬಳಿಕ, ಮೇ 6 ರಂದು ಚಿತ್ತಾಪುರಗಳಲ್ಲಿ ಮೋದಿ ಮತಬೇಟೆ ನಡೆಸಲಿದ್ದಾರೆ. ಕಲ್ಯಾಣ ಜಿಲ್ಲೆಗಳ 40 ಕ್ಷೇತ್ರಗಳಲ್ಲಿ ಕಾಂಗ್ರೆಸ್‍ನ 25 ಕೋಟೆಗಳ ವಶಕ್ಕೆ ಬಿಜೆಪಿ ತಂತ್ರ ಹೂಡಿದೆ. ಕಲ್ಯಾಣ ಕರ್ನಾಟಕದ ಹಿನ್ನೆಡೆಯೂ ಬಹುಮತ ತಲುಪಲು ಅಡ್ಡಿಯಾಗಿತ್ತು. ಹೀಗಾಗಿ ಕಲ್ಯಾಣ ಭಾಗದದಲ್ಲಿ ಕಾಂಗ್ರೆಸ್ ಮತ ಬುಟ್ಟಿಗೆ ಮೋದಿ ಕೈಹಾಕಿದ್ದಾರೆ.

ಕಲ್ಯಾಣ ಕರ್ನಾಟಕದಲ್ಲಿ 40 ಕ್ಷೇತ್ರಗಳಿದ್ದು ಪ್ರಸ್ತುತ 17 ಬಿಜೆಪಿ ಶಾಸಕರಿದ್ದಾರೆ. ಈ ಬಾರಿ ಕನಿಷ್ಟ 25 ಕ್ಷೇತ್ರಗಳನ್ನು ಗೆಲ್ಲಬೇಕೆಂಬ ಗುರಿಯನ್ನು ಬಿಜೆಪಿ ಹಾಕಿಕೊಂಡಿದೆ. ಬೆಳಗ್ಗೆ 11 ಗಂಟೆಗೆ ಚಿತ್ರದುರ್ಗದಲ್ಲಿ ಸಾರ್ವಜನಿಕ ಸಭೆಯಲ್ಲಿ ಮೋದಿ ಭಾಗವಹಿಸಲಿದ್ದು, ಮಧ್ಯಾಹ್ನ 2ಕ್ಕೆ ಹೊಸಪೇಟೆ, ಸಂಜೆ 4ಕ್ಕೆ ರಾಯಚೂರಿನ ಸಿಂಧನೂರಿನಲ್ಲಿ ಕಾರ್ಯಕ್ರಮ ನಡೆಯಲಿದೆ. ಸಂಜೆ 6:30ಕ್ಕೆ ಕಲಬುರಗಿಯಲ್ಲಿ ರೋಡ್‌ ಶೋ ನಡೆಯಲಿದೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು