Raichuru : ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಎಲ್ಲ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ಆರಂಭಿಸಿದ್ದಾರೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಗೆ ಠಕ್ಕರ್ ಕೊಡಲು ಜೆಡಿಎಸ್ ಕೂಡ ಪ್ರಯತ್ನಿಸಿದ್ದು, ಪ್ರಚಾರದಿಂದ ಅದು ಕೂಡ ಹಿಂದೆ ಬಿದ್ದಿಲ್ಲ. ಜೆಡಿಎಸ್ ನ ನಾಯಕ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ.

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ರಾಯಚೂರು ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ (JDS Candidates) ಪರ ಭರ್ಜರಿ ಮತಬೇಟೆ ನಡೆಸಿದ್ದಾರೆ. ಲಿಂಗಸುಗೂರು ಜೆಡಿಎಸ್ ಅಭ್ಯರ್ಥಿ ಸಿದ್ದು ಬಂಡಿ ಹಾಗೂ ಮಾನ್ವಿ ಜೆಡಿಎಸ್ ಅಭ್ಯರ್ಥಿ ರಾಜಾ ವೆಂಕಟಪ್ಪ ನಾಯಕ್ ಪರ ಲಿಂಗಸುಗೂರು ಹಾಗೂ ಮಾನ್ವಿಯಲ್ಲಿ ಭರ್ಜರಿ ಪ್ರಚಾರ ನಡೆಸಿದರು. ನೀರಾವರಿ ಮಾಡಿ ಎಲ್ಲ ರೈತರ ಹೊಲಗಳಿಗೆ ನೀರುಣಿಸುವುದೇ ನಮ್ಮ ಪಕ್ಷದ ಗುರಿ. ಹೀಗಾಗಿ ಜೆಡಿಎಸ್ ಬೆಂಬಲಿಸುವಂತೆ ಮನವಿ ಮಾಡಿದರು. ಲಿಂಗಸುಗೂರು, ಮುದಗಲ್ ಹಾಗೂ ಹಟ್ಟಿ ಪಟ್ಟಣದ ಕುಡಿಯುವ ನೀರಿನ ಸಮಸ್ಯೆಗೆ ಪರಿಹರಿಸುತ್ತೇನೆಂದು ಭರವಸೆ ನೀಡಿದರು.

ಮಾನ್ವಿಯಲ್ಲಿ ರಾಜಾ ವೆಂಕಟಪ್ಪ ಪರ ಮತಬೇಟೆ ನಡೆಸಿದ ಹೆಚ್‌ಡಿಕೆ ತುಂಗಭದ್ರಾ ಎಡದಂಡೆ ಕಾಲುವೆ ಕೆಳಭಾಗಕ್ಕೆ ನೀರು ಹರಿಸುವ ನಿಟ್ಟಿನಲ್ಲಿ ಕೆಲಸ ಆಗಬೇಕಿದೆ. ಹೀಗಾಗಿ ಜೆಡಿಎಸ್ ಬೆಂಬಲಿಸಿ ಎಂದು ಮನವಿ ಮಾಡಿದರು.