ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಚಾಲನೆ ನೀಡಿದ್ದ ಕೇರಳದ (Kerala) ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.

ಈ ಎಕ್ರ್ ಪ್ರೆಸ್ ರೈಲು, ತಿರುನಾವಯ ಹಾಗೂ ತಿರೂರ್ ಮಧ್ಯೆ ಸಂಚರಿಸುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಒಂದು ಕೋಚ್‌ನ ವಿಂಡ್‌ಶೀಲ್ಡ್ ಹಾನಿಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ ಎಂದು ದಕ್ಷಿಣ ರೈಲ್ವೇ ತಿಳಿಸಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಏಪ್ರಿಲ್ 25 ರಂದು ತಿರುವನಂತಪುರಂ ಸೆಂಟ್ರಲ್ ನಿಲ್ದಾಣದಲ್ಲಿ ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಿದ್ದರು. ಕಳೆದ ಮೂರು ತಿಂಗಳಲ್ಲಿ ಕಲ್ಲು ತೂರಾಟ ನಡೆದ ಮೂರನೇ ಪ್ರಕರಣ ಇದಾಗಿದೆ.

ಏಪ್ರಿಲ್ 6 ರಂದು ವಿಶಾಖಪಟ್ಟಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆದಿತ್ತು. ಮಾರ್ಚ್ 12 ರಂದು ಪಶ್ಚಿಮ ಬಂಗಾಳದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು.