Kornersite

Crime Just In Karnataka Politics State

Breaking News: ಚುನಾವಣೆ ತರಬೇತಿ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಹೃದಾಯಘಾತ!

Dharwad : ರಾಜ್ಯ ವಿಧಾನಸಭಾ ಚುನಾವಣೆಯ (Election) ಮತಗಟ್ಟೆ ಅಧಿಕಾರಿಗಳ ತರಬೇತಿ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಶಿಕ್ಷಕರೊಬ್ಬರಿಗೆ ಹೃದಯಾಘಾತ (Heart Attack) ಸಂಭವಿಸಿ ಸಾವನ್ನಪ್ಪಿರುವ ಘಟನೆ (Dharwad) ಜಿಲ್ಲೆಯಲ್ಲಿ ನಡೆದಿದೆ.

ಶಿಕ್ಷಕ ಮಲ್ಲಪ್ಪ ಭೀಮಪ್ಪ ಸೋನಾರ (54) ಸಾವನ್ನಪ್ಪಿರುವ ಶಿಕ್ಷಕ ಎನ್ನಲಾಗಿದೆ. ಜಿಲ್ಲೆಯ ಕುಂದಗೋಳ ಪಟ್ಟಣದ ಆರ್ಯ ಭಟ್ಟ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಮಲ್ಲಪ್ಪ, ವಿಧಾನಸಭಾ ಚುನಾವಣೆಯ ಮತಗಟ್ಟೆ ಅಧಿಕಾರಿಗಳ ತರಬೇತಿ ಪಡೆಯುತ್ತಿದ್ದರು.

ನಗರದಲ್ಲಿನ ಜೆಎಸ್ಸೆಸ್ ಕಾಲೇಜಿನಲ್ಲಿ ಧಾರವಾಡ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲು ನಿಯೋಜಿತರಾಗಿದ್ದ ಅಧಿಕಾರಿ, ಸಿಬ್ಬಂದಿಗೆ ತರಬೇತಿ ನೀಡಲಾಗುತ್ತಿತ್ತು. ಈ ತರಬೇತಿಯಲ್ಲಿ ಶಿಕ್ಷಕ ಮಲ್ಲಪ್ಪ ಸೋನಾರ ಭಾಗವಹಿಸಿ ತರಬೇತಿ ಪಡೆದು, ಮೆಟ್ಟಿಲು ಇಳಿದು ಮನೆಗೆ ಹೋಗುವ ಸಂದರ್ಭದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಶಿಕ್ಷಕರ ಆಕಸ್ಮಿಕ ಸಾವಿಗೆ ಶೋಕ ವ್ಯಕ್ತಪಡಿಸಿರುವ ಜಿಲ್ಲಾ ಚುನಾವಣಾಧಿಕಾರಿಗಳು, ಮೃತರ ಕುಟುಂಬಕ್ಕೆ ಸರ್ಕಾರದಿಂದ ಎಲ್ಲ ನೆರವು ತಲುಪಿಸಲಾಗುವುದು ಎಂದು ಹೇಳಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು