ಇಂದು ಸ್ಯಾಂಡಲ್ ವುಡ್ ನಟಿ ಮೇಘನಾ ರಾಜ್ ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿ ಇದ್ದಾರೆ. ತಮ್ಮ ಹುಟ್ಟುಹಬ್ಬಕ್ಕೆ ಪತಿ ಚಿರುವನ್ನ ನೆನೆದು ಫೋಟೋವೊಂದನ್ನ ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಸ್ಯಾಂಡಲ್ ವುಡ್ ನಟಿ ಮೇಘನಾ ರಾಜ್ ಅವರಿಗೆ ಇಂದು (ಮೇ3) ಹುಟ್ಟುಹಬ್ಬದ ಸಂಭ್ರಮ. ಅಭಿಮಾನಿಗಳು ಹಾಗೂ ಸ್ನೇಹಿತರು ಮೇಘನಾಗೆ ಶುಭಾಶಯ ತಿಳಿಸಿದ್ದಾರೆ.
ಮೇಘನಾ ತಮ್ಮ ಹುಟ್ಟುಹಬ್ಬದಂದು ಪತಿ ಜೊತೆ ಪ್ರವಾಸಕ್ಕೆ ತೆರಳಿದ್ದ ಫೋಟೋವೊಂದನ್ನ ಶೇರ್ ಮಾಡಿದ್ದಾರೆ. ಇದರಿಂದಲೇ ಗೊತ್ತಾಗುತ್ತೆ ಮೇಘನಾ ಪತಿ ಚಿರಂಜೀವಿಯನ್ನು ಎಷ್ಟು ಮಿಸ್ ಮಾಡಿಕೊಳ್ಳುತ್ತಿದ್ದಾರೆ.
ಮೇಘನಾ ಶೇರ್ ಮಾಡಿರುವ ಫೋಟೋಗೆ ಅಭಿಮಾನಿಗಳು ಹಾರ್ಟ್ ಇಮೋಜಿ ಕಳಿಸುವ ಮೂಲಕ ತಮ್ಮ ಪ್ರೀತಿಯನ್ನು ತಿಳಿಸುತ್ತಿದ್ದಾರೆ.
ಪತಿಯ ಸಾವಿನ ದುಖವನ್ನ ಕೊಂಚ ಮಟ್ಟಿಗೆ ಮಗ ರಾಯನ್ ರಾಜ್ ಸರ್ಜಾ ಭರಿಸುತ್ತಿದ್ದಾನೆ. ಸದ್ಯ ಮೇಘನಾ ಸಿನಿಮಾಗಳಲ್ಲಿ ಬಿಸಿಯಾಗಿದ್ದಾರೆ. ತತ್ಸಮ ತತ್ಸಮ ಸಿನಿಮಾ ಅನೌನ್ಸ್ ಆಗಿದ್ದು, ಹುಟ್ತು ಹಬ್ಬದಂದೇ ಪೋಸ್ಟರ್ ಕೂಡ ರಿಲೀಸ್ ಆಗಿದೆ.