Kornersite

Bengaluru Just In Karnataka Politics State

HVishwanath: ಜನರ ರಕ್ಷಕ ಭಜರಂಗಿಗೂ ಜನರಿಗೆ ಕಿರುಕುಳ ನೀಡುವ ಭಜರಂಗದಳಕ್ಕೂ ಸಂಬಂಧವಿಲ್ಲ!

Madikeri : ಜನರಿಗೆ ಕಿರುಕುಳ ನೀಡುವ ಭಜರಂಗದಳಕ್ಕೂ (Bajrang Dal) ಆಂಜನೇಯನಿಗೂ ಯಾವುದೇ ಸಂಬಂಧವಿಲ್ಲ ಎಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ (H.Vishwanath) ಬಿಜೆಪಿ (BJP) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಡಿಕೇರಿಯಲ್ಲಿ (Madikeri)ಯಲ್ಲಿ ಸುದ್ದಿಗಾರರೊಂದಿಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಜರಂಗದಳದವರು ನೈತಿಕ ಪೊಲೀಸ್ ಗಿರಿ ಮಾಡುತ್ತಾರೆ. ಜನರಿಗೆ ಪಾರ್ಕ್ ನಲ್ಲಿ ಒಟ್ಟಿಗೆ ಓಡಾಡಲು ಬಿಡುವುದಿಲ್ಲ. ಸಮಾಜದಲ್ಲಿ ಅಶಾಂತಿಗೆ ಭಜರಂಗದವರು ಕಾರಣರಾಗಿದ್ದಾರೆ. ಆಂಜನೇಯ ಯಾವತ್ತೂ ಕಿರುಕುಳ ಕೊಟ್ಟವನಲ್ಲ. ಆದರೆ ಭಜರಂಗದಳದವರು ಕಾನೂನು ಕೈಗೆ ತೆಗೆದುಕೊಂಡು ಎಷ್ಟೋ ಸಾವುಗಳಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ನಾಯಕರ ಹೆಣ್ಣು ಮಕ್ಕಳು ಬೇರೆ ಧರ್ಮದವರನ್ನು ಪ್ರೀತಿಸಿ ಮದುವೆಯಾಗಿಲ್ಲವೇ? ಎಲ್ಲದಕ್ಕೂ ಆಂಜನೇಯನನ್ನು ತರುವುದು ತಪ್ಪು. ನಾನು ಹಿಂದೂ, ಆಂಜನೇಯನ ಭಕ್ತ, ನನ್ನ ರಾಮ ವಿರಾಟ್ ಅಲ್ಲ. ಶಾಂತಿ ಸೌಹಾರ್ದತೆಯ ರಾಮ ಎಂದು ಹೇಳಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು