Belagavi : ಕಾಂಗ್ರೆಸ್(Congress) ಪಕ್ಷ ಹಾಗೂ ರಾಹುಲ್ ಗಾಂಧಿ(Rahul Gandhi) ವೀರ್ ಸಾವರ್ಕರ್ ಅವಮಾನಿಸುತ್ತದ್ದಾರೆ. ಇವರು 10 ಜನ್ಮ ಎತ್ತಿ ಬಂದರೂ ಸಾವರ್ಕರ್ ಅವರಂತಹ ಬಲಿದಾನ ನೋಡಲು ಆಗುವುದಿಲ್ಲ. ಹೀಗಾಗಿಯೇ ಸುವರ್ಣಸೌಧದಲ್ಲಿ ವೀರ್ ಸಾವರ್ಕರ್ ಭಾವಚಿತ್ರ ಹಾಕಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸವದತ್ತಿಯಲ್ಲಿ (Savadatti) ಚುನಾವಣಾ (Election) ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಎರಡು ಬಾರಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಏಕೈಕ ಸ್ವಾತಂತ್ರ್ಯ ಹೋರಾಟಗಾರ ವೀರ್ ಸಾವರ್ಕರ್ ಆಗಿದ್ದರು. ಆದರೆ, ಕಾಂಗ್ರೆಸ್ ಸಾವರ್ಕರ್ ಅವರನ್ನು ಹಿಂಡಲಗ (Hindalga) ಜೈಲಿಗೆ ಹಾಕಿಸಿತ್ತು. ಈಗಲೂ ಕಾಂಗ್ರೆಸ್ ಅವರನ್ನು ಅಪಮಾನಿಸುತ್ತಲೇ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೋನಿಯಾ ಗಾಂಧಿ ಮಹದಾಯಿ ನದಿ ನೀರು ಕರ್ನಾಟಕಕ್ಕೆ ಕೊಡುವುದಿಲ್ಲ ಎಂದಿದ್ದರು. ಈಗ ಅವರ ಸರ್ಕಾರ ಹೋಗಿದೆ. ಪ್ರಧಾನಿ ಮೋದಿ ಆಗಮಿಸಿ ಕರ್ನಾಟಕಕ್ಕೆ ಮಹದಾಯಿ ನೀರು ಹರಿಸುವ ನಿರ್ಧಾರ ಮಾಡಿದ್ದಾರೆ ಎಂದು ಹೇಳಿದ್ದಾರೆ.