Bangalore : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನ 11 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಭರ್ಜರಿ ರೋಡ್ ಶೋ (Road Show) ನಡೆಸಿದ್ದಾರೆ. ಈ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿ ಆಂಜನೇಯ ಮೂರ್ತಿಗೆ ನಮಸ್ಕರಿಸಿದರು.

ಕಾಂಗ್ರೆಸ್ ಬಿಡುಗಡೆಗೊಳಿಸಿದ್ದ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧಿಸುವಂತೆ ಹೇಳಲಾಗಿದ್ದ ವಿಷಯ ದೊಡ್ಡ ಮಟ್ಟದ ಚರ್ಚೆ ಹುಟ್ಟು ಹಾಕಿತ್ತು. ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಕಾರ್ಯಕರ್ತರು ವಿರೋಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೋದಿ ರೋಡ್ ಶೋ ವೇಳೆ ಹನುಮಂತನ ಮುಖವಾಡ ಧರಿಸಿದ್ದರು. ಅಷ್ಟೇ ಅಲ್ಲದೇ ಬಿಜೆಪಿ ಬಾವುಟದ ಜೊತೆಗೆ ಬಜರಂಗಿ ಬಾವುಟವು ಕಂಡು ಬಂದಿದ್ದವು. ನರೇಂದ್ರ ಮೋದಿ ಅವರು ಆಂಜನೇಯನಿಗೆ ನಮಸ್ಕರಿಸಿದ್ದು ವಿಶೇಷವಾಗಿತ್ತು.

ಚುನಾವಣಾ ಪ್ರಚಾರದ ಅಂತಿಮ ಘಟ್ಟದಲ್ಲಿ ಮತಶಿಕಾರಿ ನಡೆಸಲು ವಾರದ ಕೊನೆಯಲ್ಲಿ ಮೂರನೇ ಬಾರಿ ರಾಜ್ಯಕ್ಕೆ ಪ್ರಧಾನಿ ಮೋದಿ ಬಂದಿದ್ದಾರೆ. ಬೆಂಗಳೂರಿನ ಬ್ರಿಗೇಡ್ ಮಿಲೇನಿಯಂ ರಸ್ತೆಯಿಂದ ಪ್ರಾರಂಭವಾದ ರೋಡ್ ಶೋ ಮಲ್ಲೇಶ್ವರಂನಲ್ಲಿ ಅಂತ್ಯಗೊಂಡಿದೆ. ಪ್ರಧಾನಿ ಮೋದಿ ಅವರು ತೆರೆದ ವಾಹನದಲ್ಲಿ ಬರೋಬ್ಬರಿ 26.5 ಕಿ.ಮೀ ನಡೆದಿದೆ.
ಬ್ರಿಗೇಡ್ ಮಿಲೇನಿಯಂ ರಸ್ತೆಯಿಂದ ಮಲ್ಲೇಶ್ವರಂ 18ನೇ ಕ್ರಾಸ್ ವರೆಗೆ 11 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ರೋಡ್ ಶೋ ನಡೆದಿದೆ. ತೆರೆದ ವಾಹನದಲ್ಲಿ ಮೋದಿ ಅಬ್ಬರದ ರೋಡ್ ಶೋ ನಡೆದಿದ್ದು, ಸಹಸ್ರಾರು ಜನರತ್ತ ಮೋದಿ ಕೈಬೀಸಿದರು. ರೇಷ್ಮೆಯ ಕೇಸರಿ ಮೈಸೂರು ಪೇಟಾದಲ್ಲಿ ಕಂಗೊಳಿಸಿದರು. ಪಿಸಿ ಮೋಹನ್, ತೇಜಸ್ವಿ ಸೂರ್ಯ ಸಾಥ್ ಇದ್ದರು.