Kornersite

Bengaluru Just In Karnataka Politics State

Karnataka Assembly Election: ಕಾಂಗ್ರೆಸ್ ಅಧಿನಾಯಕಿ ರಾಜ್ಯ ಚುನಾವಣಾ ರಣರಂಗಕ್ಕೆ ಎಂಟ್ರಿ!

ರಾಜ್ಯ ವಿಧಾನಸಭಾ ಚುನಾವಣೆ (Karnataka Assembly Elections 2023) ಕಣ ರಂಗೇರಿದೆ. ಈಗಾಗಲೇ ಕಾಂಗ್ರೆಸ್ ನಲ್ಲಿ ರಾಹುಲ್ ಗಾಂಧಿ(Rahul Gandhi), ಸಿದ್ದರಾಮಯ್ಯ(Siddaramaiah), ನಟಿ ರಮ್ಯಾ, ಶಿವರಾಜ್ ಕುಮಾರ್ ಸೇರಿದಂತೆ ಹಲವಾರು ನಾಯಕರು ಹಾಗೂ ಸೆಲೆಬ್ರಿಟಿಗಳು ಪ್ರಚಾರ ನಡೆಸಿದ್ದಾರೆ. ಈಗ ಸೋನಿಯಾ ಗಾಂಧಿ ಕೂಡ ಭರ್ಜರಿ ಪ್ರಚಾರ ನಡೆಸಲು ಆಗಮಿಸುತ್ತಿದ್ದಾರೆ.

ಮೇ.6ರಂದು ಬೆಳಗಾವಿ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಪ್ರಚಾರ ನಡೆಸಲಿದ್ದು, ಯಮಕನಮರಡಿ ಕ್ಷೇತ್ರದ ಭೂತರಾಮನಹಟ್ಟಿ ಹಾಗೂ ಚಿಕ್ಕೋಡಿ ಸದಲಗಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ಯಮಕನಮರಡಿ ಕಾಂಗ್ರೆಸ್ ‌ಅಭ್ಯರ್ಥಿ ಸತೀಶ್ ಜಾರಕಿಹೊಳಿ ಪರ ಮಧ್ಯಾಹ್ನ 2 ಕ್ಕೆ ಕ್ಷೇತ್ರದ ಭೂತರಾಮನಹಟ್ಟಿಯಲ್ಲಿ, ಸಂಜೆ 4 ಕ್ಕೆ ಚಿಕ್ಕೋಡಿ-ಸದಲಗಾ ಕ್ಷೇತ್ರದ ಕಾಂಗ್ರೆಸ್ ‌ಅಭ್ಯರ್ಥಿ ಗಣೇಶ ಹುಕ್ಕೇರಿ ಪರ ಮತಯಾಚನೆ ನಡೆಸಲಿದ್ದಾರೆ.

ಹುಬ್ಬಳ್ಳಿಗೆ ಸೋನಿಯಾ ಗಾಂಧಿ ಬರುತ್ತಿದ್ದಾರೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಬಿಜೆಪಿ ಭದ್ರಕೋಟೆಗೆ ಎಂಟ್ರಿ ಕೊಡಲಿದ್ದು, ಬಿಜೆಪಿಯಿಂದ ಕಾಂಗ್ರೆಸ್ಗೆ ಬಂದಿದ್ದ ಜಗದೀಶ್ ಶೆಟ್ಟರ್ ಗೆಲ್ಲಿಸಲು ಕಾಂಗ್ರೆಸ್ ವರಿಷ್ಠೆ ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ. ಸಮಾವೇಶದಲ್ಲಿ ಭಾಗಿಯಾಗಿ ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆ ನಡೆಸಲಿದ್ದಾರೆ. ಉತ್ತರ ಕರ್ನಾಟಕವನ್ನೇ ಟಾರ್ಗೆಟ್ ಮಾಡಿಕೊಂಡಿರುವ ಕಾಂಗ್ರೆಸ್, ಸೋನಿಯಾ ಅವರನ್ನು ಈ ಭಾಗದತ್ತ ಕರೆಸುತ್ತಿದ್ದಾರೆ. ಮಧ್ಯಾಹ್ನ 3 ಕ್ಕೆ ಹುಬ್ಬಳ್ಳಿಯ ಸೆಟ್ಲಮೆಂಟ್‌ ನ ಹಾಕಿ ಮೈದಾನದಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಬಾಗವಹಿಸಲಿದ್ದಾರೆ. ನಂತರ ವಿಶೇಷ ವಿಮಾನದ ಮೂಲಕ ಪ್ರಯಾಣಿಸಲಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು