Kornersite

Bengaluru Just In Karnataka Politics State

Karnataka Assembly Election: ಬೆಂಗಳೂರಿನ 11 ವಿಧಾನನಸಭಾ ಕ್ಷೇತ್ರದಲ್ಲಿ ಪ್ರಧಾನಿ ರೋಡ್ ಶೋ!

Bangalore : ರಾಜ್ಯ ಚುನಾವಣೆ ರಂಗೇರಿದೆ. ಪ್ರಧಾನಿ ನರೇಂದ್ರ ಮೋದಿ ಆದಿಯಾಗಿ ಎಲ್ಲ ಪಕ್ಷಗಳ ಬಹುತೇಕ ನಾಯಕರು ರಾಜ್ಯದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಮಾಡುವುದರ ಮೂಲಕ ಮತ ಶಿಖಾರಿ ನಡೆಯುತ್ತಿದೆ. ಇಂದು ಮೂರನೇ ಬಾರಿ ರಾಜ್ಯಕ್ಕೆ ಬಂದಿರುವ ಪ್ರಧಾನಿ ಮೋದಿ (Narendra Modi) ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಬೃಹತ್ ರೋಡ್ ಶೋ (Road Show) ನಡೆಸಲಿದ್ದಾರೆ.

ಇಂದು ಬೆಳಿಗ್ಗೆ 10ಕ್ಕೆ ಆರಂಭವಾಗಿ ಮಧ್ಯಾಹ್ನ 12:30ರ ವರೆಗೆ ಬರೋಬ್ಬರಿ 26.5 ಕಿ.ಮೀಟರ್ ರೋಡ್ ಶೋ ನಡೆಯಲಿದೆ. ಬ್ರಿಗೇಡ್ ಮಿಲೇನಿಯಂ ರಸ್ತೆಯಿಂದ ಮಲ್ಲೇಶ್ವರಂ 18ನೇ ಕ್ರಾಸ್‌ ವರೆಗೆ 11 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ರೋಡ್ ಶೋ ನಡೆಯಲಿದೆ.
ರೋಡ್ ಶೋ ಬ್ರಿಗೇಡ್ ಮಿಲೇನಿಯಂ ರೋಡ್, ಟಿಎಂಸಿ ಲೇಔಟ್, ಮಾರೇನಹಳ್ಳಿ ರೋಡ್, ಜೆಪಿನಗರ 5ನೇ ಹಂತ, ಜಯನಗರ ಮೆಟ್ರೋ ಸ್ಟೇಷನ್, ಜಯನಗರ ಟ್ರಾಫಿಕ್ ಪೊಲೀಸ್ ಸ್ಟೇಷನ್, ಆರ್.ವಿ ರೋಡ್, ಸೌತ್ ಎಂಡ್ ಸರ್ಕಲ್, ಆರ್ಮುಗಂ ಸರ್ಕಲ್, ಮಾಧವ ರಾವ್ ಸರ್ಕಲ್, ದೊಡ್ಡ ಗಣಪತಿ ಟೆಂಪಲ್ ಜಂಕ್ಷನ್, ರಾಮಕೃಷ್ಣ ಆಶ್ರಮ, ಉಮಾ ಥಿಯೇಟರ್ ಸಿಗ್ನಲ್, ಟಿ.ಆರ್. ಮಿಲ್ ಜಂಕ್ಷನ್, ಶಿರ್ಸಿ ಸರ್ಕಲ್, ಬಿನ್ನಿಮಿಲ್ ಸರ್ಕಲ್, ಕುಷ್ಠರೋಗ ಆಸ್ಪತ್ರೆ, ಮಾಗಡಿ ರೋಡ್ ಟೋಲ್‍ಗೇಟ್.

ವೀರೇಶ್ ಥಿಯೇಟರ್, ಬಿಎಸ್‍ಎನ್‍ಎಲ್ ವಿಜಯನಗರ , ನಾಗರಬಾವಿ ಮುಖ್ಯರಸ್ತೆ, ಗೋವಿಂದರಾಜನಗರ, ಮಾಗಡಿ ರೋಡ್ ಜಂಕ್ಷನ್, ಹಾವನೂರು ಸರ್ಕಲ್, ಬಸವೇಶ್ವರನಗರ, ಶಂಕರಮಠ, ಮೋದಿ ಹಾಸ್ಪಿಟಲ್ ಸಿಗ್ನಲ್, ನವರಂಗ್ ಬ್ರಿಡ್ಜ್, ಮಹಾಕವಿ ಕುವೆಂಪು ರಸ್ತೆ, ಕೆ.ಸಿ. ಜನರಲ್ ಆಸ್ಪತ್ರೆ, ಸಂಪಿಗೆ ರಸ್ತೆ, ಮಲ್ಲೇಶ್ವರ, ಕಾಡು ಮಲ್ಲೇಶ್ವರ ದೇವಸ್ಥಾನದವರೆಗೆ ಸಾಗಲಿದೆ. ರಸ್ತೆಯುದ್ದಕ್ಕೂ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಸಾವಿರಾರು ಸಂಖ್ಯೆಯಲ್ಲಿ ಮತದಾರರು ಭಾಗವಹಿಸುವ ನಿರೀಕ್ಷೆ ಇದೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು