ನಟಿ ರಮ್ಯಾ (Ramya) ಅವರ ಕಾಣೆಯಾಗಿದ್ದ ಪ್ರೀತಿಯ ನಾಯಿ ಸಾವನ್ನಪ್ಪಿದೆ ಎಂದು ಸ್ವತಃ ಅವರೇ ಟ್ವೀಟ್ ಮಾಡಿ ಹೇಳಿದ್ದಾರೆ.
ಚಾಂಪ್ (Champ) ಸಾವನ್ನಪ್ಪಿದೆ. ಹುಡುಕಲು ಸಹಾಯ ಮಾಡಿದ ಎಲ್ಲರಿಗೂ ಧನ್ಯವಾದ ಎಂದು ನಟಿ ರಮ್ಯಾ ಟ್ವೀಟ್ ನಲ್ಲಿ ಹೇಳಿದ್ದಾರೆ. ಇಂದು ಬೆಳಿಗ್ಗೆ ನಾಯಿ ಕಾಣೆಯಾಗಿರುವ ಕುರಿತು ನಟಿ ರಮ್ಯಾ ಟ್ವೀಟ್ ಮಾಡಿದ್ದರು. ಮೇ. 6 ರಿಂದ ನೆಚ್ಚಿನ ನಾಯಿ ಚಾಂಪ್ ಕಾಣೆಯಾಗಿದೆ. ಕರಿ ಬಣ್ಣದ ಪರ್ಟೈಲಿ ತಳಿಯ ನಾಯಿ ಅದು. ಹುಡುಕಿ ಕೊಟ್ಟವರಿಗೆ ಸೂಕ್ತ ಬಹುಮಾನ ನೀಡಲಾಗುವುದು. ಯಾರಿಗಾದರೂ ನಾಯಿ ಕಂಡರೆ 7012708137 ಈ ನಂಬರ್ ಗೆ ಕರೆ ಮಾಡಿ ಎಂದು ಅವರು ಪೋಸ್ಟ್ ಮಾಡಿದ್ದರು.
ನಟಿ ರಮ್ಯಾ ವಾಸವಿದ್ದ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ತಾಜ್ ವೆಸ್ಟ್ ಎಂಡ್ ಹೋಟೆಲ್ ನಿಂದ ನಾಯಿ ಕಾಣೆಯಾಗಿದೆ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ತನ್ನ ನೆಚ್ಚಿನ ನಾಯಿಯನ್ನು ಹುಡುಕಿಕೊಡುವಂತೆ ಅವರು ಸಾರ್ವಜನಕರಲ್ಲಿ ಮನವಿ ಮಾಡಿದ್ದರು. ಸದ್ಯ ತಮ್ಮ ಮುದ್ದಿನ ಶ್ವಾನ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ನಟಿ ರಮ್ಯಾಗೆ ನಾಯಿ ಎಂದರೆ ತುಂಬಾ ಪ್ರೀತಿ ಎಂಬುವುದು ಎಲ್ಲರಿಗೂ ಗೊತ್ತು. ನಾನು ಏನ್ ಮಾಡ್ಲಿ ಸ್ವಾಮಿ.. ನನ್ನ ಹುಡುಗಿ ನಾಯಿ ಪ್ರೇಮಿ’ ಎನ್ನುವ ಹಾಡು ಕೂಡ ಸಖತ್ ಫೇಮಸ್ ಆಗಿತ್ತು.