Mysore : ಅಧಿದೇವತೆ ತಾಯಿ ಚಾಮುಂಡೇಶ್ವರಿ ಚಿನ್ನದ ಅಂಬಾರಿಯನ್ನು ಹೊತ್ತು ಮೈಸೂರಿನ ರಾಜಬೀದಿಗಳಲ್ಲಿ ಗಾಂಭೀರ್ಯವಾಗಿ ನಡೆಯುತ್ತಿದ್ದ ಬಲರಾಮ (67) ಸಾವನ್ನಪ್ಪಿದ್ದಾನೆ.
ಬಲರಾಮನು (Balarama) ಬರೋಬ್ಬರಿ 14 ಬಾರಿ ಅಂಬಾರಿಯನ್ನು ಹೊತ್ತಿದ್ದ. ಬಲರಾಮನ ಬಾಯಲ್ಲಿ ಹುಣ್ಣಾಗಿತ್ತು. ಹೀಗಾಗಿ ಕಳೆದ ಹತ್ತು ದಿನಗಳಿಂದ ನೋವಿನಿಂದ ಬಳಲುತ್ತಿದ್ದ ಬಲರಾಮನಿಗೆ ಆಹಾರ ಸೇವನೆ ಕಷ್ಟವಾಗುತ್ತಿತ್ತು. ಆದರೆ, ಇಂದು ಅಸ್ವಸ್ಥಗೊಂಡಿದ್ದ ಬಲರಾಮನಿಗೆ ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್ನ ಭೀಮನಕಟ್ಟೆ ಆನೆ ಶಿಬಿರದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬಲರಾಮ ಸಾವನ್ನಪ್ಪಿದ್ದಾನೆ.
ದಸರಾ ಮೆರವಣಿಗೆಯಲ್ಲಿ ಭಾಗವಹಿಸುತ್ತಿದ್ದ ಆನೆಗಳಲ್ಲಿ ಬಲರಾಮ ಕೂಡ ಒಬ್ಬ. 1987 ರಲ್ಲಿ ಕರ್ನಾಟಕದ ಕೊಡಗು ಪ್ರದೇಶದ ಸೋಮವಾರಪೇಟೆ ಬಳಿಯ ಕಟ್ಟೆಪುರ ಅರಣ್ಯದಲ್ಲಿ ಬಲರಾಮನನ್ನು ಸೆರೆಹಿಡಿಯಲಾಗಿತ್ತು. ನಂತರ ಬಲರಾಮನಿಗೆ ತರಬೇತಿ ನೀಡಲಾಗಿತ್ತು. ದ್ರೋಣನ ನಂತರ ಅಂಬಾರಿಯನ್ನು ಹೊರಲು ಬಲರಾಮ ಆಯ್ಕೆಯಾಗಿದ್ದ. 5,600 ಕಿಲೋ ತೂಕ ಇರುವ ಆನೆ ಅರ್ಜುನ, ಆಕಸ್ಮಿಕವಾಗಿ ಮಾವುತನನ್ನು ಕೊಂದಿದ್ದಕ್ಕಾಗಿ ಅಂಬಾರಿ ಹೊರುವ ಅವಕಾಶದಿಂದ ವಂಚಿತನಾಗಿದ್ದ. ಹೀಗಾಗಿ ಬಲರಾಮನನ್ನು ಆಯ್ಕೆ ಮಾಡಲಾಯಿತು. ಅದರಂತೆ 1999 ಮತ್ತು 2011 ರ ನಡುವೆ ಒಟ್ಟು 14 ಬಾರಿ ಚಾಮುಂಡೇಶ್ವರಿಯನ್ನು ಚಿನ್ನದ ಅಂಬಾರಿಯಲ್ಲಿ ಹೊತ್ತು ಬಲರಾಮ ಸಾಗಿತ್ತ.