Kornersite

International Just In

Fload: ಭೀಕರ ಪ್ರವಾಹಕ್ಕೆ 200 ಜನ ಬಲಿ; ಹಲವರು ಕಣ್ಮರೆ!

ಕಾಂಗೊ ಪ್ರಜಾತಾಂತ್ರಿಕ ಗಣರಾಜ್ಯದ ದಕ್ಷಿಣ ಕಿವು ಪ್ರಾಂತದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಪ್ರವಾಹ ಉಂಟಾಗಿ ಪ್ರವಾಹದ ಪರಿಣಾಮ 200ಕ್ಕೂ ಅಧಿಕ ಜನ ಸಾವನ್ನಪ್ಪಿ ಹಲವರು ನಾಪತ್ತೆಯಾಗಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.

ನೆರೆಯ ರಾಷ್ಟ್ರವಾದ ರ್ವಾಂಡಾದಲ್ಲಿಯೂ ಸತತವಾಗಿ ಭಾರೀ ಮಳೆಯಾಗುತ್ತಿದ್ದು, ಅಲ್ಲಿ ಕೂಡ ಹಲವಾರು ಜನ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಭೀಕರ ಪ್ರವಾಹದಿಂದಾಗಿ ನೂರಾರು ಮನೆಗಳು ಕೊಚ್ಚಿಹೋಗಿದ್ದು, ಕಾಲೆಹೆ, ಕೀವು ನದಿ ಪಶ್ಚಿಮ ಪ್ರದೇಶ ಹಾಗೂ ರ್ವಾಂಡಜಾ ಗಡಿ ಪ್ರದೇಶದಲ್ಲಿ 50ಕ್ಕೂ ಅಧಿಕ ಜನ ನಾಪತ್ತೆಯಾಗಿದ್ದಾರೆಂದು ಕ್ಷಿಣ ಕಿವು ಪ್ರಾಂತದ ಗವರ್ನರ್ ಥಿಯೊ ನಗ್ವಾಭಿಜೆ ಮಾಹಿತಿ ನೀಡಿದ್ದಾರೆ.
ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ಹಾಗೂ ಪ್ರವಾಹದಿಂದಾಗಿ 200ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ ಹಾಗೂ 100ಕ್ಕೂ ಅಧಿಕ ಜನ ನಾಪತ್ತೆಯಾಗಿರುವುದಾಗಿ ಹೇಳಿದ್ದಾರೆ. ಸಾವನ್ನಪ್ಪಿದವರ ಸ್ಮರಣಾರ್ಥವಾಗಿ ಸೋಮವಾರ ರಾಷ್ಟ್ರೀಯ ಶೋಕಾಚಾರಣೆಗೆ ಕಾಂಗೊ ಪ್ರಜಾತಾಂತ್ರಿಕ ಗಣರಾಜ್ಯ ಸರ್ಕಾರ ಕರೆ ನೀಡಿದೆ.

You may also like

International

ಅಮೆರಿಕದಲ್ಲಿ ಭೀಕರ ಸುಂಟರಗಾಳಿ – 7 ಜನ ಸಾವು

Washington : ಅಮೆರಿಕ(America)ದಲ್ಲಿ ಭೀಕರ ಸುಂಟರಗಾಳಿ ಬೀಸಿದ ಪರಿಣಾಮ 7 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.ಅಮೆರಿಕದ ಅರ್ಕಾನ್ಸಾಸ್‌ (Arkansas) ಮತ್ತು ಇಲಿನಾಯ್ಸ್‌ (Illinois)ರಾಜ್ಯಗಳಲ್ಲಿ ಬೀಸಿದ ಸುಂಟಗಾಳಿಗೆ ಹತ್ತಾರು
International Tech

ಹಾರಿ ಹೋದ ನೀಲಿ ಹಕ್ಕಿ- ಜಾಗ ತುಂಬಿದ ನಾಯಿ

Washington : ಟ್ವಿಟ್ಟರ್ ಸಿಇಓ ಎಲಾನಾ ಮಸ್ಕ್ ಟ್ವಿಟ್ಟರ್ ಖರೀದಿಸಿದಾಗಿನಿಂದ ಹೆಚ್ಚು ಸುದ್ದಿಯಾಗುತ್ತಲೇ ಇದ್ದಾರೆ. ಸದ್ಯ ಲೋಗೋದಿಂದ ನೀಲಿ ಹಕ್ಕಿ ತೆಗೆದು ನಾಯಿ ಚಿತ್ರ ಹಾಕಿದ್ದು, ದೊಡ್ಡ