Kornersite

Just In Sports

IPL 2023: ಆರ್ ಸಿಬಿ ಅಭಿಮಾನಿಗಳಿಗೆ ಮತ್ತೆ ನೋವು; ಪ್ಲೇ ಆಫ್ ಹಂತದಲ್ಲಿ ಬೆಂಗಳೂರಿನಿಂದ ನೀರಸ ಪ್ರದರ್ಶನ!

IPL 2023 : ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (Royal Challengers Bangalore) ತಂಡವನ್ನು ಫಿಲ್ ಸಾಲ್ಟ್ ಬ್ಯಾಟಿಂಗ್‌ ಹಾಗೂ ಶಿಸ್ತುಬದ್ಧ ಬೌಲಿಂಗ್‌ ದಾಳಿಯ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ (DelhiCapitals) ತಂಡವು 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದದ ಆರ್‌ಸಿಬಿ (RCB) 20 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 181 ರನ್‌ ಗಳಿಸಿತು. 182 ರನ್‌ ಗಳ ಬೃಹತ್‌ ಮೊತ್ತ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್‌ 16.4 ಓವರ್‌ ಗಳಲ್ಲಿಯೇ 187ರನ್‌ ಸಿಡಿಸಿ ಗೆಲುವು ಸಾಧಿಸಿತು. ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಆರಂಭದಿಂದಲೇ ಆರ್ ಸಿಬಿ ಮೇಲೆ ಮುಗಿಬಿದ್ದಿತು. ಫಿಲ್ ಸಾಲ್ಟ್ (Phil Salt) ಆರ್‌ಸಿಬಿ ಬೌಲರ್‌ಗಳನ್ನ ಹಿಗ್ಗಾಮುಗ್ಗಾ ದಂಡಿಸಿದರು. ಡೇವಿಡ್‌ ವಾರ್ನರ್‌ (David Warner) 22 ರನ್‌, ಮಿಚೆಲ್‌ ಮಾರ್ಷ್‌ (Mitchell Marsh) 26 ರನ್‌, ಬೌಲರ್‌ಗಳನ್ನು ಚೆಂಡಾಡಿದ ಫಿಲ್ ಸಾಲ್ಟ್ ಸ್ಫೋಟಕ 87 ರನ್‌, ರಿಲೀ ರೋಸೌವ್ 35 ರನ್‌, ಅಕ್ಷರ್‌ ಪಟೇಲ್‌ 3 ಎಸೆತಗಳಲ್ಲಿ 8 ರನ್‌ ಗಳಿಸಿ ಅಜೇಯರಾಗುಳಿದರು. ಬೆಂಗಳೂರು ತಂಡದ ಪರ ಜೋಶ್ ಹ್ಯಾಜಲ್ವುಡ್, ಕರ್ಣ್ ಶರ್ಮಾ ಹಾಗೂ ಹರ್ಷಲ್‌ ಪಟೇಲ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಭರ್ಜರಿ ರನ್ ಕಲೆ ಹಾಕಬೇಕು ಎಂದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದ ಆರ್‌ಸಿಬಿ ತಂಡ ವಿಕೆಟ್‌ ಕಳೆದುಕೊಂಡ ಹೊರತಾಗಿಯೂ ಸವಾಲಿನ ಗುರಿ ನೀಡುವಲ್ಲಿ ಯಶಸ್ವಿಯಾಯಿತು. ನಾಯಕ ಫಾಫ್ ಡು ಪ್ಲೆಸಿಸ್ (Faf du Plessis) 45 ರನ್, ವಿರಾಟ್ ಕೊಹ್ಲಿ 46 ಎಸೆತಗಳಲ್ಲಿ 55 ರನ್, 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ 11 ರನ್ ಗಳಿಸುವ ಮೂಲಕ ತಂಡವು 150ರ ಗಡಿ ದಾಟುವಂತೆ ಮಾಡಿದರು.

ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಮಹಿಪಾಲ್ ಲೊಮ್ರೊರ್ (Mahipal Lomror) 29 ಎಸೆತಗಳಲ್ಲಿ 6 ಬೌಂಡರಿ ಮತ್ತು 3 ಸಿಕ್ಸರ್ ಸಹಿತ ಅಜೇಯ 54 ರನ್ ಗಳಿಸಿದರು. ಅನುಜ್ ರಾವತ್ 3 ಎಸೆತಗಳಲ್ಲಿ ಅಜೇಯ 8 ರನ್ ಗಳಿಸಿದರು. ಡೆಲ್ಲಿ ಪರ ಮಿಚೆಲ್ ಮಾರ್ಷ್ ಎರಡು ವಿಕೆಟ್ ಪಡೆದರೆ, ಖಲೀಲ್ ಅಹ್ಮದ್ ಹಾಗೂ ಮುಕೇಶ್ ಕುಮಾರ್ ತಲಾ ಒಂದೊಂದು ವಿಕೆಟ್ ಪಡೆದರು.

You may also like

Sports

ಡಿವೈನ್ ಭರ್ಜರಿ ಆಟಕ್ಕೆ ಮಂಕಾದ ಜೈಂಟ್ಸ್!

ಮುಂಬಯಿ : ಆಲ್‌ ರೌಂಡರ್‌ ಸೋಫಿ ಡಿವೈನ್‌ ಭರ್ಜರಿ ಆಟಕ್ಕೆ ಗುಜರಾತ್ ಜೈಂಟ್ಸ್ ತಂಡವು ಸೋಲು ಒಪ್ಪಿಕೊಳ್ಳುವಂತಾಯಿತು.ಗುಜರಾತ್‌ ಜೈಂಟ್ಸ್‌ ವಿರುದ್ಧ ಆರ್ ಸಿಬಿ 8 ವಿಕೆಟ್‌ ಗಳ
Sports

ಮಾಜಿ ಕ್ರಿಕೆಟಿಗ ಸಲೀಂ ದುರಾನಿ ಇನ್ನಿಲ್ಲ!

ನವದೆಹಲಿ : ಭಾರತೀಯ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಹಾಗೂ ಆಲ್ ರೌಂಡರ್ ಆಟಗಾರ ಸಲೀಂ ದುರಾನಿ ವಯೋಸಹಜ ಕಾಯಿಲೆಯಿಂದಾಗಿ ಸಾವನ್ನಪ್ಪಿದ್ದಾರೆ.1960ರ ದಶಕದಲ್ಲಿ ಭಾರತದ ಆಲ್ ರೌಂಡರ್