Bangalore: ಸಿಲಿಕಾನ್ ಸಿಟಿಯ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬೈಕ್ ರ‍್ಯಾಲಿ ನಡೆದ ಸಂದರ್ಭದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ಮಧ್ಯೆ ಗಲಾಟೆ (clash) ನಡೆದಿರುವ ಘಟನೆ ಬೆಳಕಿಗೆ ಬಂದಿದೆ.
ಈ ವಿಧಾನಸಭಾ ಕ್ಷೇತ್ರದ ಅಟ್ಟೂರು ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಓರ್ವ ಜೆಡಿಎಸ್ ಕಾರ್ಯಕರ್ತನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎನ್ನಲಾಗಿದೆ.
ಅಟ್ಟೂರು ಬಡಾವಣೆಯಲ್ಲಿ ಬೈಕ್ ರ‍್ಯಾಲಿ ನಡೆಸುತ್ತಿದ್ದಾಗ ಎರಡೂ ಪಕ್ಷಗಳ ಕಾರ್ಯಕರ್ತರು ಎದುರು ಬದರಾಗಿದ್ದಾರೆ. ಈ ಸಂದರ್ಭದಲ್ಲಿ ಪರಸ್ಪರ ಘೋಷಣೆಗಳನ್ನು ಕೂಗಿದ್ದಾರೆ. ಈ ಸಂದರ್ಭದಲ್ಲಿ ಪರಿಸ್ಥಿತಿ ಕೈ ಮೀರಿ ಹೋಗಿದೆ. ಹೀಗಾಗಿ ಎರಡೂ ಪಕ್ಷಗಳ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದೆ. ಯಲಹಂಕ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.