Kornersite

Bengaluru Just In Karnataka Politics State

Narendra Modi: ನಂಜನಗೂಡು ಶ್ರೀಕಂಠೇಶ್ವರ ದರ್ಶನ ಮಾಡಿದ ಪ್ರಧಾನಿ!

Mysore : ರಾಜ್ಯ ಚುನಾವಣೆಯಲ್ಲಿ ಭರ್ಜರಿ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಂಜನಗೂಡಿನಲ್ಲಿನ ಶ್ರೀಕಂಠೇಶ್ವರನ (Srikanteshwara Temple) ದರ್ಶನ ಪಡೆದು ತಮ್ಮ ಚುನಾವಣಾ ಪ್ರಚಾರ ಹಾಗೂ ಮತ ಬೇಟೆ ಅಂತ್ಯಗೊಳಿಸಿದರು.

ಅವರ ಕೊನೆಯ ಸಮಾವೇಶ ನಂಜನಗೂಡಿನಲ್ಲಿ ನಡೆಯಿತು. ಈ ಕಾರ್ಯಕ್ರಮ ಮುಗಿಸಿದ ಕೂಡಲೇ ನೇರವಾಗಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಪ್ರಧಾನಿಯನ್ನು ಮಂಗಳವಾದ್ಯಗಳೊಂದಿಗೆ ಭವ್ಯವಾಗಿ ಸ್ವಾಗತಿಸಲಾಯಿತು. ದೇವಸ್ಥಾನದ ಮುಖ್ಯ ಅರ್ಚಕರ ವೃಂದ ಪೂರ್ಣಕುಂಬ ಸ್ವಾಗತ ನೀಡಿ ಬರಮಾಡಿಕೊಂಡಿತು. ದೇವಾಲಯ ಪ್ರವೇಶಿಸಿ ಮೊದಲು ಮಹಾಗಣಪತಿ ದರ್ಶನ ಪಡೆದ ಪ್ರಧಾನಿ ಮೋದಿ ಅವರು ಶ್ರೀಕಂಠೇಶ್ವರನ ಗರ್ಭಗುಡಿ ಪ್ರವೇಶಿಸಿ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಲೋಕಕಲ್ಯಾಣಕ್ಕಾಗಿ ಶ್ರೀಕಂಠೇಶ್ವರನ ಮುಂದೆ ಸಂಕಲ್ಪ ಮಾಡಿದರು. ಅದಕ್ಕೂ ಮುನ್ನ ಗರ್ಭಗುಡಿಯಲ್ಲಿ ಕೆಲನಿಮಿಷ ಕುಳಿತು ಪ್ರಾರ್ಥಿಸಿದರು. ಗರ್ಭಗುಡಿ ಪ್ರದಕ್ಷಿಣೆ ಹಾಕಿ, ಪಾರ್ವತಿ ದೇವಿ ದರ್ಶನ ಪಡೆದರು. ಚಂಡೀಕೇಶ್ವರ ಮತ್ತು ನಂದೀಕೇಶ್ವರ ದೇವರ ದರ್ಶನ ಪಡೆದರು.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು