Kornersite

Crime Just In National

Crime News: ಭೀಕರ ದೋಣಿ ಅಪಘಾತ; ದೋಣಿ ಮುಳುಗಿ 22 ಜನ ಬಲಿ!

ತಿರುವನಂತಪುರಂ: ಪ್ರವಾಸಿಗರು ಇದ್ದ ದೋಣಿ (Tourist Boat) ಮುಳುಗಿದ ಪರಿಣಾಮ ಮಕ್ಕಳು ಸೇರಿದಂತೆ 22 ಜನ ಸಾವನ್ನಪ್ಪಿರುವ ಘಟನೆ ಕೇರಳದ (Kerala) ಮಲಪ್ಪುರಂನಲ್ಲಿ (Malappuram) ನಡೆದಿದೆ.

ಕೇರಳದ ಮಲಪ್ಪುರಂನ ತನೂರ್‌ ನಲ್ಲಿ ಈ ಘಟನೆ ನಡೆದಿದೆ. ಈ ದೋಣಿಯಲ್ಲಿ 40 ಪ್ರಯಾಣಿಕರು ದೋಣಿಯಲ್ಲಿ ಇದ್ದರು. ದೋಣಿ ಮುಗುಚಿ ಬಿದ್ದ ಪರಿಣಾಮ 22 ಜನ ಸಾವನ್ನಪ್ಪಿದ್ದು, ಇನ್ನಷ್ಟು ಜನ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ, ದೋಣಿಯನ್ನು ದಡಕ್ಕೆ ತರುವ ಪ್ರಯತ್ನ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಯುತ್ತಿದೆ.

ಸಚಿವ ವಿ. ಅಬ್ದುರಹಿಮಾನ್‌ ಈ ಕುರಿತು ಮಾಹಿತಿ ನೀಡಿದ್ದು, ಸಾವಿನ ಸಂಖ್ಯೆ ಸದ್ಯ 22ಕ್ಕೆ ಏರಿದೆ. 7 ಜನರ ಸ್ಥೀತಿ ಗಂಭೀರವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟ ಕುಟುಂಬಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದು, ಪರಿಹಾರ ನಿಧಿಯಿಂದ 2 ಲಕ್ಷ ರೂ ಘೋಷಿಸಿದ್ದಾರೆ.

ಕೇರಳದ ಮಲಪ್ಪುರಂನಲ್ಲಿ ದೋಣಿ ದುರಂತದಿಂದ ಪ್ರಾಣಹಾನಿಯಾಗಿದ್ದು, ನೋವು ತಂದಿದೆ. ಮೃತ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂ.ವನ್ನು ಮೃತರ ಮುಂದಿನ ಸಂಬಂಧಿಕರಿಗೆ ನೀಡಲಾಗುವುದು ಎಂದು ಪ್ರಧಾನಿ ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಸಿಎಂ ಪಿಣರಾಯಿ ವಿಜಯನ್ ಕೂಡ ಸಾವಿಗೆ ಸಂತಾಪ ಸೂಚಿಸಿ, ತುರ್ತು ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಮಲಪ್ಪುರಂ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ