ಮದುವೆಯ ನೆನಪಿಗಾಗಿ ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಸುಂದರ ಕ್ಷಣಗಳನ್ನು ಸೆರೆಹಿಡಿಯಲು ಫೋಟೋಗ್ರಾಫರ್ ಬೇಕೆ ಬೇಕು. ಛಾಯಾಗ್ರಾಹಕ ಇಲ್ಲ ಎಂದರೆ, ಅದು ಮದುವೆಯೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಈ ಫೋಟೋಗ್ರಾಫರ್ ಗಳಿಗೆ ಬೆಲೆ ಇದೆ.
ಆದರೆ ಇಲ್ಲೊಂದು ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬರು ತನ್ನ ಮದುವೆಯ ಫೋಟೋಗಳನ್ನು ತೆಗೆದ ಛಾಯಾಗ್ರಾಹಕ, ತನಗೆ ಹಣವನ್ನು ವಾಪಸ್ ನೀಡಬೇಕು ಎಂದು ಕೇಳಿದ್ದಾರೆ. ಫೋಟೋಗ್ರಾಫರ್ ಗೆ ಸುಮಾರು ನಾಲ್ಕು ವರ್ಷಗಳ ನಂತರ ವಾಟ್ಸ್ ಆಪ್ ಮೆಸೆಜ್ ಮಾಡಿ ಸಂಪರ್ಕಿಸಿದ್ದಾರೆ. ಅಲ್ಲದೇ, ವಿಚ್ಛೇದನದ ಕುರಿತು ಹೇಳಿ ಫೋಟೋಗಳಿಗೆ ತೆಗೆದುಕೊಂಡ ಹಣವನ್ನು ಮರುಪಾವತಿ ಮಾಡುವಂತೆ ಕೋರಿದ್ದಾರೆ.
‘ನಾನು ಈಗ ವಿಚ್ಛೇದನವನ್ನು ಪಡೆದಿದ್ದೇನೆ. ಮತ್ತು ನನ್ನ ಮದುವೆಯ ದಿನದ ಫೋಟೋಗಳು ಇನ್ನು ಮುಂದೆ ನನಗೆ ಮತ್ತು ನನ್ನ ಮಾಜಿ ಪತಿಗೆ ಅಗತ್ಯವಿಲ್ಲ ಎಂದು ಮಹಿಳೆ ಜೋಹಾನ್ಸ್ ಬರ್ಗ್ ಮೂಲದ ಫೋಟೋಗ್ರಾಫರ್ ಲ್ಯಾನ್ಸ್ ರೋಮಿಯೋಗೆ ಕೇಳಿದ್ದಾರೆ. ಛಾಯಾಗ್ರಾಹರ ಲ್ಯಾನ್ಸ್ ರೋಮಿಯೀ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಇದು ವೈರಲ್ ಆಗಿದೆ.