Kornersite

Bengaluru Just In Karnataka Politics State

ಇಂದು ಸಂಜೆ 5 ಗಂಟೆಯಿಂದ ಬಾರ್ ಗೆ ಬೀಗ: 3 ದಿನ ಸಿಗೋದಿಲ್ಲ ಎಣ್ಣೆ

ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಾಲ್ಕು ದಿನಗಳ ಕಾಲ ಮದ್ಯ ಮಾರಾಟ ಬಂದ್ ಮಾಡಲಾಗುವುದು. ಹೀಗಾಗಿ ಎಲ್ಲೆಡೆ ಮದ್ಯ ಮಾರಾಟಕ್ಕೆ ಭಾರೀ ಬೇಡಿಕೆ ಬಂದಿದೆ.

ಇಂದು ಸಂಜೆ 5 ಗಂಟೆಯಿಂದ ಮದ್ಯ ಮಾರಾಟ ಮತ್ತು ಸಾಗಣೆಗೆ ನಿಷೇಧ ಜಾರಿಯಾಗಲಿದೆ. ಹೀಗಾಗಿ ರಾಜ್ಯದಲ್ಲಿ ಮೇ 9, 10, 13 ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌ ಆಗಲಿದೆ. ಮೇ 8 ರ ಸಂಜೆ 5 ರಿಂದ 10ರ ಮಧ್ಯರಾತ್ರಿ 12 ಗಂಟೆವರೆಗೆ ಎಲ್ಲ ಕ್ಷೇತ್ರಗಳಲ್ಲಿ ಮದ್ಯ ಮಾರಾಟ ಮಳಿಗೆಗಳಲ್ಲಿ ಮದ್ಯ ಮಾರಾಟ ಮತ್ತು ಪೂರೈಕೆ ನಿಷೇಧಿಸಲಾಗಿದೆ. ಈ ಕುರಿತು ಆಯಾ ಜಿಲ್ಲಾಧಿಕಾರಿಗಳು ಪ್ರತ್ಯೇಕ ಆದೇಶ ಹೊರಡಿಸಿದ್ದಾರೆ.

ಮತ ಎಣಿಕೆ ದಿನವೂ ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ. ಮೇ 13ರಂದು ಬೆಳಗ್ಗೆ 6ರಿಂದ ಮಧ್ಯರಾತ್ರಿ 12 ಗಂಟೆವರೆಗೆ ಮದ್ಯದಂಗಡಿಗಳು ಬಂದ್‌ ಆಗಲಿವೆ. ನಾಲ್ಕು ದಿನಗಳ ಅವಧಿಯಲ್ಲಿ ಮದ್ಯ ದಾಸ್ತಾನು ಮಾಡುವುದಕ್ಕೆ ಕಡಿವಾಣ ಹಾಕಬೇಕು. ಈ ಕುರಿತಂತೆ ಸಮಗ್ರ ನಿರ್ದೇಶನಗಳನ್ನು ನೀಡಬೇಕು ಎಂದು ಆಯೋಗ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಹೀಗಾಗಿ ಹಲವರು ಮದ್ಯ ಖರೀದಿಗೆ ಮುಗಿಬಿದಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು