Bangalore : ದೇಶ ಹಾಗೂ ವಿದೇಶ ಮಾರುಕಟ್ಟೆಯಲ್ಲಿ ಏರಿಕೆಯ ನಾಗಾಲೋಟ ಮುಂದುವರೆಸಿದ್ದ ಚಿನ್ನ ಹಾಗೂ ಬೆಳ್ಳಿಯ ಬೆಲೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ. 22 ಕ್ಯಾರೆಟ್ ನ 10 ಗ್ರಾಮ್ ಚಿನ್ನದ ಬೆಲೆ ಕಳೆದ ವಾರ 3 ದಿನದಲ್ಲಿ 1,500 ರೂ.ಗಳಷ್ಟು ಏರಿಕೆ ಕಂಡಿತ್ತು. ಈಗ ಎರಡು ದಿನದಲ್ಲಿ ಸತತವಾಗಿ ಬೆಲೆ ಇಳಿಕೆಯಾಗಿದೆ.
ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 56,490 ರೂ. ಇಳಿದಿದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 61,630 ರುಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 7,770 ರೂ. ಆಗಿದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 56,540 ರೂ. ಇದೆ. ಬೆಳ್ಳಿ ಬೆಲೆ 100 ಗ್ರಾಂಗೆ 8,240 ರೂ. ಇದೆ.
ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಚಿನ್ನದ ಬೆಲೆಯಲ್ಲಿ ಏರಿಕೆಯಾಗಬುಹುದು ಎಂದು ಅಂದಾಜಿಸಲಾಗಿದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 8ಕ್ಕೆ):
22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ: 56,490 ರೂ
24 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ: 61,630 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 777 ರೂ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ಮಲೇಷ್ಯಾ: 2,890 ರಿಂಗಿಟ್ (53,233 ರೂ.)
ದುಬೈ: 2262.5 ಡಿರಾಮ್ (50,350 ರೂ.)
ಅಮೆರಿಕ: 615 ಡಾಲರ್ (50,263 ರೂ.)
ಸಿಂಗಾಪುರ: 832 ಸಿಂಗಾಪುರ್ ಡಾಲರ್ (51,277 ರೂ.)
ಕತಾರ್: 2,325 ಕತಾರಿ ರಿಯಾಲ್ (52,189 ರೂ)
ಓಮನ್: 246 ಒಮಾನಿ ರಿಯಾಲ್ (52,579 ರೂ.)