Kornersite

Bengaluru Just In Karnataka State

SSLC Resul: ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ; 625 ಅಂಕ ಪಡೆದ ನಾಲ್ವರು ವಿದ್ಯಾರ್ಥಿಗಳು! ಈ ಬಾರಿ ರಾಜ್ಯದಲ್ಲಿ ಉತ್ತಮ ಫಲಿತಾಂಶ!

Bangalore : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಎಸ್ಸೆಸ್ಸೆಲ್ಸಿ (SSLC) ಫಲಿತಾಂಶ (Result) ಪ್ರಕಟಗೊಳಿಸಿದ್ದು, ಈ ಬಾರಿ ರಾಜ್ಯದಲ್ಲಿ ಶೇ. 83.89 ಫಲಿತಾಂಶ ಬಂದಿದೆ.

2023ರ ಮಾರ್ಚ್ 31 ರಿಂದ ಏಪ್ರಿಲ್ 15ರ ವರೆಗೆ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆದಿದ್ದವು. ರಾಜ್ಯದ ಒಟ್ಟು 15,498 ಪ್ರೌಢಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ಈ ಪೈಕಿ 7,00,619 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಸರ್ಕಾರಿ ಶಾಲೆ ಶೇ. 86.74, ಅನುದಾನ ಶಾಲೆ ಶೇ. 85.64%, ಖಾಸಗಿ ಶೇ. 90.89% ಫಲಿತಾಂಶ ಸಾಧಿಸಿದೆ. 4 ಜನ ವಿದ್ಯಾರ್ಥಿಗಳು 625 ಅಂಕಗಳಿಸಿದ್ದಾರೆ.

ಗ್ರಾಮೀಣ ಮತ್ತು ಸರ್ಕಾರ ಶಾಲಾ ಮಕ್ಕಳ ಉತ್ತನ ಸಾಧನೆ ಮಾಡಿದ್ದು, ಬಾಲಕರು – 3,41,108( 80.08%) ಹಾಗೂ ಬಾಲಕಿಯರು – 3,59,511( 87.98%) ತೇರ್ಗಡೆ ಹೊಂದಿದ್ದಾರೆ. ಈ ಬಾರಿ ಮೊದಲ ಸ್ಥಾನವನ್ನು ಚಿತ್ರದುರ್ಗ (96.80%) ಹಾಗೂ ದ್ವಿತೀಯ ಸ್ಥಾನವನ್ನು ಮಂಡ್ಯ (96.74%), ತೃತೀಯ ಸ್ಥಾನವನ್ನು ಹಾಸನ (96.68%) ಜಿಲ್ಲೆ ಪಡೆದುಕೊಂಡಿದೆ. ಇನ್ನೂ ಕೊನೆ ಸ್ಥಾ‌ನದಲ್ಲಿ ಯಾದಗಿರಿ (75.49%) ಜಿಲ್ಲೆಯಿದೆ. ವಿದ್ಯಾರ್ಥಿಗಳು ಫೋಟೋ ‌ಕಾಪಿ ಪಡೆಯಲು ಮೇ 14 ಕೊನೆ ದಿನವಾಗಿದ್ದು, ಮರು ಮೌಲ್ಯಮಾಪನ, ಮರು ಎಣಿಕೆಗೆ ಮೇ 21 ಕೊನೆರಯ ದಿನವಾಗಿದೆ. ಪೂರಕ ಪರೀಕ್ಷೆ ನೋಂದಣಿಗೆ ಮೇ 15 ಕೊನೆ ದಿನವಾಗಿದೆ. ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‍ಸೈಟ್‍ karresults.nic.in ನಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ವೀಕ್ಷಿಸಬಹುದು.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ