Kornersite

Bengaluru Just In Karnataka Politics State

ನಕಲಿ ಪತ್ರದ ಬಗ್ಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರವೊಂದನ್ನ ಬರೆದಿದ್ದರು ಎನ್ನಲಾಗಿತ್ತು. ಆದರೆ ಈ ಪತ್ರ ನಕಲಿ. ನನ್ನ ಹೆಸರಲ್ಲಿ ನಕಲಿ ಪತ್ರವನ್ನ ಬರೆಯಲಾಗಿದೆ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಇದು ನಾನು ಬರೆದಿರುವ ಪತ್ರ ಅಲ್ಲ, ಕೆಲವು ಕುತಂತ್ರಿಗಳು ಮಾಡಿರೋ ಕೆಲಸ. ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಭಿನ್ನಾಪ್ರಾಯ ಉಂಟುಮಾಡಲು ಈ ನಕಲಿ ಪತ್ರವನ್ನ ಸೃಷ್ಠಿ ಮಾಡಿದ್ದಾರೆ. ನನ್ನ ವಿರುದ್ದ ಹುನ್ನಾರ ನಡೆಸಿದ್ದಾರೆ. ಇದನ್ನ ನಾನು ಸ್ಪಷ್ಟ ಪಡಿಸುತ್ತೇನೆ, ಇದೊಂದು ನಕಲಿ ಪತ್ರ, ನಾನು ಯಾವ ಪತ್ರವನ್ನು ಬರೆದಿಲ್ಲ ಎಂದು ವಿಡಿಯೋ ಮೂಲಕ ಸಿದ್ದರಾಮಯ್ಯ ತಿಳಿಸಿದ್ದಾರೆ.

RSS ನಂತ ಕುತಂತ್ರಿಗಳು ಇದನ್ನ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಜನರಲ್ಲಿ ನಾನು ಮನವಿ ಮಾಡುತ್ತೇನೆ, ಈ ಪತ್ರವನ್ನ ಜನ ತಿರಸ್ಕಾರ ಮಾಡಬೇಕು. ಈ ನಕಲಿ ಪತ್ರದ ಬಗ್ಗೆ ಚುನಾವಣಾ ಆಯೋಗಕ್ಕೆ ಹಾಗೂ ಪೊಲೀಸರಿಗೆ ದೂರು ನೀಡುತ್ತೇನೆ. ಈ ಪತ್ರ ಸೃಷ್ಟಿ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡುತ್ತೇನೆ ಎಂದ ಸಿದ್ದರಾಮಯ್ಯ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು