Bangalore : ಸಿಲಿಕಾನ್ ಸಿಟಿಯ ಬಿಟಿಎಂ ಲೇಔಟ್ ನಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.
ನಿನ್ನೆ ರಾತ್ರಿ 9 ಗಂಟೆಗೆ ಇಲ್ಲಿನ ಒಂದನೇ ಹಂತದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಬಿಜೆಪಿ ಅಭ್ಯರ್ಥಿ ಶ್ರೀಧರ್ ರೆಡ್ಡಿ ಅವರ ಪರ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಮಾಜಿ ಮೇಯರ್ ಮಂಜುನಾಥ್ ರೆಡ್ಡಿ, ಲಿತೇಶ್, ನಂದನ್ ಎಂಬುವವರು ಹಲ್ಲೆ ಮಾಡಿದ್ದಾರೆ ಎಂದು ಆರೋಪ ಕೇಳಿ ಬಂದಿದ್ದು, ಅವರ ವಿರುದ್ಧ ಮಡಿವಾಳ ಠಾಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಧರ್ ರೆಡ್ಡಿ ದೂರು ನೀಡಿದ್ದಾರೆ. ಪ್ರಕರಣ ಖಂಡಿಸಿ ಬಿಜೆಪಿ ಕಾರ್ಯಕರ್ತರು ಮತ್ತು ಸಂಸದ ತೇಜಸ್ವಿ ಸೂರ್ಯ ಪೊಲೀಸ್ ಠಾಣೆಯಲ್ಲಿಯೇ ಪ್ರತಿಭಟನೆ ನಡೆಸಿದರು. ಅಲ್ಲದೇ, ಕೂಡಲೇ ಆರೋಪಿಗಳನ್ನು ಬಂಧಿಸದಿದ್ದರೆ, ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.