NewDelhi : ರಾಜ್ಯದಲ್ಲಿ ನಾಳೆ ಮತದಾನ ನಡೆಯಲಿದೆ. ಆದರೆ, ಈ ಬಾರಿ ಹಣದ ಹೊಳೆ ಹರಿಸಲು ಅಭ್ಯರ್ಥಿಗಳು ಮುಂದಾಗಿದ್ದರು ಎನ್ನಲಾಗಿದೆ. ಅಧಿಕಾರಿಗಳು ಕೂಡ ದಿಟ್ಟತನದಿಂದ ದಾಳಿ ನಡೆಸಿ, ಒಟ್ಟು 375 ಕೋಟಿ ರೂಪಾಯಿ ನಗದು ಹಾಗೂ ವಸ್ತುಗಳನ್ನು ವಶಪಡಿಸಿಕೊಂಡಿದೆ. ಈ ಕುರಿತು ಭಾರತ ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ.
ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ ಜಾರಿ ನಿರ್ದೇಶನಾಲಯ 288 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಚುನಾವಣಾ ಆಯೋಗ ಈ ಮಾಹಿತಿ ಬಹಿರಂಗಪಡಿಸಿದೆ. 2018 ರ ವಿಧಾನಸಭಾ ಚುನಾವಣೆಗೆ ಹೋಲಿಸಿದರೆ ಗಮನಾರ್ಹ ರೀತಿಯಲ್ಲಿ 4.5 ಪಟ್ಟು ಹೆಚ್ಚಾಗಿದೆ ಎಂದು ಹೇಳಿದೆ.
ಈ ಬಾರಿಯ ಕರ್ನಾಟಕ ಚುನಾವಣೆಯಲ್ಲಿ ಅಕ್ರಮ ವಸ್ತುಗಳ ಸಾಗಟ ಕುರಿತು ಪರಿಶೀಲಿಸಲಾಗಿದ್ದು, 147.46 ಕೋಟಿ ರೂ. ನಗದು ಮತ್ತು 83.66 ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಸಮಿತಿ ಹೇಳಿದೆ.
ಈ ಪೈಕಿ 23.6 ಕೋಟಿ ಮೌಲ್ಯದ ಔಷಧಗಳು, 96.6 ಕೋಟಿ ಮೌಲ್ಯದ ಅಮೂಲ್ಯ ಲೋಹಗಳು ಮತ್ತು 24.21 ಕೋಟಿ ಮೌಲ್ಯದ ಉಡುಗೊರೆಗಳು ಸೇರಿವೆ. 2023ರಲ್ಲಿ ಒಟ್ಟು 375 ಕೋಟಿ ರೂ.ಗೂ ಅಧಿಕ ಮೊತ್ತದ ನಗದು ಹಾಗೂ ವಸ್ತುಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ 288 ಕೋಟಿ ರೂಪಾಯಿ ಆಸ್ತಿಯನ್ನು ಇಡಿ ಜಪ್ತಿ ಮಾಡಿದೆ ಎಂದು ಇಸಿ ಹೇಳಿದೆ.