Ballary : ರಾಜ್ಯ ವಿಧಾನಸಭೆ ಚುನಾವಣೆ (Assembly Election) ಗೆ ಈ ಬಾರಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಯುವ ಮತದಾರರು, ಶತಾಯುಷಿಗಳು, ನವ ವಧು-ವರರು ಮತದಾನ ಮಾಡಿ ಹಕ್ಕು ಚಲಾಯಿಸಿದ್ದಾರೆ. ಇದೇ ರೀತಿ ಮತದಾನಕ್ಕೆಂದು ಬಂದಿದ್ದ ಮಹಿಳೆಗೆ ಮತದಾನ ಕೇಂದ್ರದಲ್ಲಿಯೇ ಹೆರಿಗೆಯಾಗಿರುವ ಘಠನೆಯೊಂದು ಬೆಳಕಿಗೆ ಬಂದಿದೆ.
ಈ ಘಟನೆ ಜಿಲ್ಲೆಯ ಕುರುಗೋಡು ತಾಲೂಕಿನ ಕೊರ್ಲಾಗುಂದಿ ಗ್ರಾಮದ ಮತದಾನ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ತುಂಬು ಗರ್ಭಿಣಿ ಮಣಿಲಾ ಅವರು ಮತದಾನ ಕೇಂದ್ರಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಅವರಿಗೆ ನೋವು ಕಾಣಿಸಿಕೊಂಡಿದ್ದು, ಹೆರಿಗೆಯಾಗಿದೆ ಎನ್ನಲಾಗಿದೆ.
ಕೂಡಲೇ ಮಹಿಳೆಯನ್ನು ಪಕ್ಕದ ಕೊಠಡಿಗೆ ಕರೆದುಕೊಂಡು ಹೋಗಿ ಆರೈಕೆ ಮಾಡಲಾಗಿದೆ. ಅಷ್ಟರಲ್ಲಿಯೇ ಮಹಿಳೆಯು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯ ತಾಯಿ ಹಾಗೂ ಮಗು ಆರೋಗ್ಯವಾಗಿದದು, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ.