Islamabad : ಪಾಕ್ ನ (Pakistan) ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ಬಂಧಿಸಿದ್ದಕ್ಕೆ ಪಂಜಾಬ್‍ನಲ್ಲಿ (Punjab) ಪ್ರತಿಭಟನೆ ನಡೆಸುತ್ತಿರುವ 1000 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರಲ್ಲಿ 945 ಜನ ಕಾನೂನು ಉಲ್ಲಂಘಿಸಿದ್ದಾರೆ ಎನ್ನಲಾಗಿದೆ. ಉಳಿದವರು ಬೆಂಬಲ ನೀಡಿದ್ದಾರೆ ಎನ್ನಲಾಗಿದೆ. ಪಾಕಿಸ್ತಾನದ ಪ್ಯಾರಾ ಮಿಲಿಟರಿ ಪಡೆ ನಿನ್ನೆ ಇಮ್ರಾನ್ ಖಾನ್ ಅವರನ್ನು ಬಂಧಿಸಿತ್ತು. ಆ ನಂತರ ಉಂಟಾದ ಹಿಂಸಾಚಾರದಲ್ಲಿ 130 ಅಧಿಕಾರಿಗಳು ಗಾಯಗೊಂಡಿದ್ದರು.
ವಿಚಾರಣೆಗಾಗಿ ಇಸ್ಲಾಮಾಬಾದ್‍ನ ಹೈಕೋರ್ಟ್ (Islamabad High Court) ತೆರಳುತ್ತಿದ್ದ ವೇಳೆಯೇ ಇಮ್ರಾನ್‍ಖಾನ್ ಅವರನ್ನು ಬಂಧಿಸಲಾಗಿತ್ತು. ಇಮ್ರಾನ್ ಖಾನ್ ಬಂಧನವನ್ನು ವಿರೋಧಿಸಿ ಅವರ ಬೆಂಬಲಿಗರು ಲಾಹೋರ್‌ನಲ್ಲಿರುವ ಸೇನಾ ಕಮಾಂಡರ್‌ಗಳ ನಿವಾಸದ ಆವರಣವನ್ನು ಪ್ರವೇಶಿಸಿ ದಾಂಧಲೆ ನಡೆಸಿದ್ದರು. ಅಲ್ಲದೇ, ಹಲವಾರು ಪ್ರಮುಖ ನಗರಗಳಲ್ಲಿ ಪ್ರತಿಭಟನೆ ಜೋರಾಗಿದ್ದವು. ಈ ಹಿನ್ನೆಲೆಯಲ್ಲಿ ಸೆಕ್ಷನ್ 144 ಜಾರಿಯಲ್ಲಿದ್ದು, ಉಲ್ಲಂಘನೆಯಾದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.