Kornersite

Bengaluru Crime Just In Karnataka Politics State

Karnataka Assembly Election: ವಿಜಯಪುರದಲ್ಲಿ ನಡೆದ ಪ್ರಕರಣ; 30 ಜನ ಅರೆಸ್ಟ್!

Vijyapura : ವಿಧಾನಸಭಾ ಚುನಾವಣೆ (Assembly Election) ಸಂದರ್ಭದಲ್ಲಿ ಮತದಾನದ ತಪ್ಪು ನಿರ್ಧಾರದಿಂದಾಗಿ ಗ್ರಾಮಸ್ಥರೇ ಮತ ಯಂತ್ರಗಳನ್ನು (Voting Machine) ಪುಡಿಪುಡಿ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು 30 ಜನರನ್ನು ಬಂಧಿಸಿದ್ದಾರೆ.

ವಿಜಯಪುರ (Vijayapura) ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮತಯಂತ್ರ ಕೆಟ್ಟಲ್ಲಿ ಬಳಕೆಗೆ ಎಂದು ರಿಸರ್ವ್ ಇಡಲಾಗಿದ್ದ ಇವಿಎಂ (EVM), ವಿವಿಪ್ಯಾಟ್ ಮಶೀನ್‌ ಗ್ರಾಮಸ್ಥರು ಆಕ್ರೋಶಗೊಂಡು ಒಡೆದಿದ್ದಾರೆ. ಚುನಾವಣಾ ಸಿಬ್ಬಂದಿ ಮರಳಿ ಒಯ್ಯುವುದನ್ನು ಗಮನಿಸಿ, ಪ್ಱಸ್ನಿಸಿದ್ದಾರೆ. ಸಿಬ್ಬಂದಿ ಸರಿಯಾಗಿ ಉತ್ತರ ನೀಡದ ಹಿನ್ನೆಲೆಯಲ್ಲಿ ತಪ್ಪು ಭಾವಿಸಿ ಮತಯಂತ್ರ ಒಡೆದು ಹಾಕಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸುಮಾರು 30 ಜನರನ್ನು ವಶಕ್ಕೆ ಪಡೆಯಲಾಗಿದೆ. ಗ್ರಾಮಸ್ಥರು ಇವಿಎಂ, ವಿವಿಪ್ಯಾಟ್‌ಗಳು ಹಾಗೂ ಕಾರನ್ನು ಹಾನಿಗೊಳಿಸಿದ್ದಾರೆ. ಈ ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಎಸ್ಪಿ ಹೆಚ್‌ಡಿ ಆನಂದ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಅರ್ಧಕ್ಕೆ ಮತದಾನ ಕಾರ್ಯ ಸ್ಥಗಿತಗೊಳಿಸಿ ಮರಳಿ ಇವಿಎಂ ಮಂತ್ರ ಒಯ್ಯಲಾಗುತ್ತದೆ ಎಂದು ತಪ್ಪು ಭಾವಿಸಿ, ಮತ ಯಂತ್ರ ಒಡೆದು ಹಾಕಿದ್ದಾರೆ. ಘಟನೆಯ ವೇಳೆ ಅಧಿಕಾರಿಗಳ ಕಾರನ್ನು ಜಖಂಗೊಳಿಸಿದ್ದಾರೆ. ಸಿಬ್ಬಂದಿಗೂ ಥಳಿಸಿದ್ದು, ಘಟನೆಯಿಂದಾಗಿ ಮಸಬಿನಾಳ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಆದರೂ ಸಹ ಮತದಾನ ಪ್ರಕ್ರಿಯೆ ಮುಂದುವರಿದಿದೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು