ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಒಗ್ಗಟ್ಟಾಗಿ ಕಾಂಗ್ರೆಸ್ ಗೆಲ್ಲಿಸುವ ತಂತ್ರ ಹೆಣೆದ್ದಿದ್ದಾರೆ. ತಮ್ಮ ಸಿಎಂ ಮೇಲಿನ ಕನಸು ಚುನಾವಣೆ ಸಂದರ್ಭದಲ್ಲಿ ಮತದಾರರ ಮೇಲೆ ಯಾವುದೇ ಪರಿಣಾಮ ಬೀರಬಾರದು ಎಂಬ ಕಾರಣಕ್ಕೆ ಒಗ್ಗಟ್ಟಿನ ಮಂತ್ರ ಪಠಿಸಿದ್ದರು. ಸದ್ಯ ಚಾಮುಂಡೇಶ್ವರಿ ದರ್ಶನಕ್ಕೂ ಕೈ ಕೈ ಹಿಡಿದು ತೆರಳಿ, ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ.
ಚಾಮುಂಡಿಬೆಟ್ಟಕ್ಕೆ ಆಗಮಿಸಿ ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಒಟ್ಟಿಗೆ ಈಡುಗಾಯಿ ಒಡೆಯುವ ಮೂಲಕ ದೇವರಿಗೆ ಹರಕೆ ಸಲ್ಲಿಸಿದರು. ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಿದ ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯರನ್ನು ಭೇಟಿ ಮಾಡಿದ ನಂತರ ಇಬ್ಬರೂ ದೇವಸ್ಥಾನಕ್ಕೆ ತೆರಳಿದರು.
ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ವೇಳೆ ಇಬ್ಬರೂ ನಾಯಕರಿಗೆ ಹೂವಿನ ಹಾರ ಹಾಕಿದ ಅರ್ಚಕರು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ದೇವಿಯ ಗರ್ಭಗುಡಿಯಲ್ಲಿ ಗ್ಯಾರಂಟಿ ಕಾರ್ಡ್ ಪ್ರದರ್ಶಿಸಿದರು. ಮಾಜಿ ಸಚಿವ ಕೆ.ಜೆ.ಜಾರ್ಜ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ ಸೇರಿದಂತೆ ಹಲವರು ಇದ್ದರು.