ಇಂದು ರಾಜ್ಯ 224 ಕ್ಷೇತ್ರಗಳಲ್ಲಿ 2023ರ ವಿಧಾನಸಭೆ ಚುನಾವಣೆಗೆ ಮತದಾನ ನಡೆಯುತ್ತಿದ್ದು, ರಾಜ್ಯದ ಮತದಾರರು ಉತ್ಸುಕರಾಗಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಅವರು ಪುತ್ರ ಭರತ್ ಬೊಮ್ಮಾಯಿ ಹಾಗೂ ಪುತ್ರಿ ಅದಿತಿ ಬೊಮ್ಮಾಯಿಯೊಂದಿಗೆ ಶಿಗ್ಗಾಂವಿ ಪಟ್ಟಣದ ಸರಕಾರಿ ಕನ್ನಡ ಹಿರಿಯ ಮಾದರಿ ಗಂಡುಮಕ್ಕಳ ಶಾಲೆಯ ಮತಗಟ್ಟೆ ಸಂಖ್ಯೆ 102ರಲ್ಲಿ ಹಕ್ಕು ಚಲಾಯಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಮತದಾನ ಮಾಡಲು ತೆರಳುವ ಮುನ್ನ ಬೆಳಿಗ್ಗೆ 8 ಗಂಟೆಗೆ ಹುಬ್ಬಳ್ಳಿಯ ಅಶೋಕ ನಗರದಲ್ಲಿರುವ ಆಂಜನೇಯನ ದೇವಸ್ಥಾನಕ್ಜೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ಶಿಗ್ಗಾಂವಿಯ ತಡಸ ಕ್ರಾಸ್ ಬಳಿ ಇರುವ ಗಾಯತ್ರಿ ದೇವಿ ಮಂದಿರಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. “ನಮ್ಮ ಪಕ್ಷದ ಪ್ರಚಾರದ ರೀತಿ ಮತ್ತು ಜನರು ಪ್ರತಿಕ್ರಿಯಿಸಿದ ರೀತಿಯಿಂದ ನನಗೆ ತುಂಬಾ ಸಂತೋಷವಾಗಿದೆ, ಕರ್ನಾಟಕದ ಅಭಿವೃದ್ಧಿಗೆ ಬಂದು ಮತ ಚಲಾಯಿಸುವಂತೆ ನಾನು ಜನರಲ್ಲಿ ಮನವಿ ಮಾಡುತ್ತೇನೆ,” ಎಂದು ಹೇಳಿದ್ದರು.