ರಾಜ್ಯದ ಹಲವು ಪ್ರದೇಶಗಳಲ್ಲಿ ಮುಂದಿನ 2 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಭಾರಿ ಮಳೆ(Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ರಾತ್ರಿ ಹೊತ್ತು ಮಳೆ ಬರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ರೂಪುಗೊಂಡ ಸೈಕ್ಲೋನ್ ಮೋಕಾ ಹಗಲಿನಲ್ಲಿ ಬಂಗಾಳ ಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರದ ಮೇಲೆ ಹಾದುಹೋಗುತ್ತದೆ. ಈ ಸಂದರ್ಭದಲ್ಲಿ ಉತ್ತರ ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿರುತ್ತದೆ.