ರಾಜ್ಯ ವಿಧಾನಸಭಾ ಚುನಾವಣೆ ಮತದಾನ ಮುಗಿದ ನಂತರ ಹಲವು ಅಭ್ಯರ್ಥಿಗಳು ರಿಲ್ಯಾಕ್ಸ್ ಆಗಿದ್ದಾರೆ. ಕೆಲವರು ಫ್ಯಾಮಿಲಿ ಜೊತೆ ಟೈಂ ಸ್ಪೆಂಡ್ ಮಾಡುತ್ತಿದ್ದಾರೆ. ಆದ್ರೆ ಹೆಚ್ ಡಿ ಕುಮಾರಸ್ವಾಮಿ ಮಾತ್ರ ಸಡನ್ ಆಗಿ ವಿದೇಶಕ್ಕೆ ಹಾರಿದ್ದಾರೆ. ಹೌದು ಹೆಚ್ ಡಿ ಕುಮಾರಸ್ವಾಮಿ ಸಿಂಗಾಪುರಕ್ಕೆ ಹಾರಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಇನ್ನೆರಡು ದಿನದಲ್ಲಿ ಹೊರಬೀಳಲಿದೆ. ಆದ್ರೆ ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುತ್ತಿದ್ದಂತೆ ಮಧ್ಯರಾತ್ರಿ ತಮ್ಮ ಆಪ್ತರೊಂದಿಗೆ ಬೆಂಗಳೂರಿನಿಂದ ಸಿಂಗಾಪುರಕ್ಕೆ ಹೋಗಿದ್ದಾರೆ ಹೆಚ್ ಡಿ ಕುಮಾರಸ್ವಾಮಿ. ಕೆಲವು ವಿಚಾರಗಳ ಬಗ್ಗೆ ಚರ್ಚೆ ಮಾಡಲು ಸಿಂಗಾಪುರಕ್ಕೆ ಹೋಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಹೆಚ್ ಡಿ ಕುಮಾರಸ್ವಾಮಿಯವರ ಈ ನಡೆ ಬಗ್ಗೆ ಬಿಜೆಪಿ ಹಾಗೂ ಕಾಂಗ್ರೆಸ್ ಕಣ್ಣಿಟ್ಟಿವೆ.
ಇನ್ನು ಹೆಚ್ ಡಿ ಕುಮಾರಸ್ವಾಮಿ ರಾಜ್ಯ ವಿಧಾನಸಭೆಯ ಫಲಿತಾಂಶ ಪ್ರಕಟವಾಗುವ ಅಂದರೆ ಮೇ ೧೩ರ ಮಧ್ಯಾನ್ಹ ಬೆಂಗಳೂರಿಗೆ ವಾಪಸ್ ಬರಲಿದ್ದಾರೆ. ರಾಜ್ಯ ಹಾಗೂ ದೇಶದಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ಮತದಾನೋತ್ತರ ಸಮೀಕ್ಶೆ ಹೊರ ಬಂದಿದ್ದು, ಅದರಲ್ಲಿ ಜೆಡಿ ಎಸ್ ೩೦ ಸ್ಥಾನಗಳನ್ನು ದಾಟುವುದಿಲ್ಲ ಎಂದು ಹೇಳಲಾಗಿದೆ. ಆದರೆ ಅತಂತ್ರ ಸ್ಥಿತಿ ಬರಲಿದ್ದು, ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಗುವುದಿಲ್ಲ ಎಂಬ ಮಾಹಿತಿ ಹೊರ ಬಂದಿದೆ. ಈ ಹಿನ್ನೆಲೆಯಲ್ಲಿ ಅತಂತ್ರ ಸ್ಥಿತಿ ಬಂದರೆ ಯಾರ ಜೊತೆ ಕೈ ಜೋಡಿಸಬೇಕು ಎನ್ನುವ ಚರ್ಚೆ ಸಿಂಗಾಪುರದಲ್ಲಿ ನಡೆಯಲಿದೆ. ಹೀಗಾಗಿ ಈಗಾಗಲೇ ಹೆಚ್ ಡಿ ಕುಮಾರಸ್ವಾಮಿ ಜೆಡಿ ಎಸ್ ಪಕ್ಷದ ಗೆಲ್ಲುವ ಅಭ್ಯರ್ಥಿಗಳ ಬಗ್ಗೆ ನಿಗಾವಹಿಸುವಂತೆ ಸೂಚಿಸಿದ್ದಾರೆ.