Kornersite

Bengaluru Just In Karnataka Politics State

ಕರ್ನಾಟಕದ ಜನರಿಗೆ ಧನ್ಯವಾದ ಅರ್ಪಿಸಿದ ರಾಹುಲ್ ಗಾಂಧಿ

Bangalore : ರಾಜ್ಯ ವಿಧಾನಸಭಾ ಚುನಾವಣೆ (Assembly Election) ಸುಸ್ರೂತವಾಗಿ, ಯಶಸ್ವಿಯಾಗಿ ನಡೆದಿದೆ. ಮತದಾನ ಮುಕ್ತಾಯವಾಗಿದ್ದೇ ತಡ, ಎಕ್ಸಿಟ್ ಪೋಲ್ ಬಿಡುಗಡೆಯಾಗಿವೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಸಾಧಿಸಲಿದೆ ಎಂದು ಹಲವು ಸಮೀಕ್ಷೆಗಳು ಹೇಳಿವೆ. ಇನ್ನೂ ಕೆಲವು ಸಮೀಕ್ಷೆಗಳು ಸಮ್ಮಿಶ್ರ ಹಾಗೂ ಬಿಜೆಪಿಗೆ ಬಹುಮತ ಎಂದು ಹೇಳಿವೆ. ಆದರೆ, ಹೆಚ್ಚಿನ ಸಮೀಕ್ಷೆಗಳು ಕಾಂಗ್ರೆಸ್ ಬಹುಮತ ಸಾಧಿಸಬಹುದು ಎಂದು ಹೇಳಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಧನ್ಯವಾದ ಅರ್ಪಿಸಿದ್ದಾರೆ.

ಮತದಾನ ಮುಗಿದು ಚುನಾವಣೋತ್ತರ ಸಮೀಕ್ಷೆಗಳು (Exit Polls) ಬಿಡುಗಡೆಯಾಗಿವೆ. ಹೆಚ್ಚಿನ ಎಕ್ಸಿಟ್ ಪೋಲ್ ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ಗೆ (Congress) ಮುನ್ನಡೆ ಸಿಕ್ಕಿದೆ. ಈ ಹಿನ್ನೆಲೆ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಕರ್ನಾಟಕದ ಜನತೆಗೆ ಧನ್ಯವಾದ ತಿಳಿಸಿದ್ದಾರೆ. ಕಾಂಗ್ರೆಸ್ ನಾಯಕರು ಹಾಗೂ ಸಿಂಹದಂತಿರುವ ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸುತ್ತೇನೆ. ಅವರು ಘನತೆಯುತ ಮತ್ತು ಉತ್ತಮವಾದ ಪ್ರಚಾರ ಮಾಡಿದ್ದಾರೆ. ಪ್ರಗತಿಪರ ಭವಿಷ್ಯಕ್ಕಾಗಿ ಮತ ಹಾಕಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಕರ್ನಾಟಕದ ಜನತೆಗೆ ಧನ್ಯವಾದಗಳು ಎಂದು ರಾಹುಲ್ ಗಾಂಧಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಮ್ಯಾಜಿಕ್ ನಂಬರ್ ಗೆ 113 ಸ್ಥಾನಗಳ ಅಗತ್ಯವಿದ್ದು ಕಾಂಗ್ರೆಸ್, ಬಿಜೆಪಿ ಮಧ್ಯೆ ಭಾರೀ ಸ್ಪರ್ಧೆ ನಡೆಯುತ್ತಿರುವುದು ಸ್ಪಷ್ಟವಾಗಿದೆ. ಒಂದು ವೇಳೆ ಒಂದು ಪಕ್ಷ ಬಹುಮತ ಸಾಧಿಸಿದರೆ, ಇನ್ನೊಂದು ಪಕ್ಷಕ್ಕೆ ಹೆಚ್ಚಿನ ಹೊಡೆತ ಬೀಳಲಿದೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು