Kornersite

Crime Just In Karnataka State

Chikkamagaluru: ಟಿಟಿ ಹಾಗೂ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು

ಟಿಟಿ ಹಾಗೂ ಕಾರು ಡಿಕ್ಕಿ ಕೊಡೆದ ಪರಿಣಾಮ ಕಾರಿನಲ್ಲಿದ್ದ ಮಗು ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಟು ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ನಡೆದಿದೆ. ಇನ್ನು ಟಿಟಿ ವಾಹನದಲ್ಲಿದ್ದ ಕೇರಳ ಮೂಲದ ಕೇರಳ ಮೂಲದ 7 ಪ್ರವಾಸಿಗರಿಗೆ ಗಂಭೀರ ಗಾಯಗೊಂಡಿದ್ದಾರೆ.

ಈ ಅಪಘಾತ ಕಡೂರು ತಾಲೂಕಿನ ಮತಿಘಟ್ಟ ಕ್ರಾಸ್ ಬಳಿ ನಡೆದಿದ್ದು, ಕಾರಿನಲ್ಲಿದ್ದ ಗಿರಿಧರ್ (46) ಮಯಾಂಕ್ (3) ಸ್ಥಳದಲ್ಲೇ ಸಾವನಪ್ಪಿದ್ದಾರೆ. ಹೊನ್ನಾವರದಿಂದ ಸ್ಸಂಬಂಧಿಕರ ಮದುವೆಗೆ ಗಿರಿಧರ್ ಕುಟುಂಬ ತೆರಳುವಾಗ ಘಟನೆ ನಡೆದಿದ್ದು, ಕೇರಳದಿಂದ ಚಿಕ್ಕಮಗಳೂರಿಗೆ ಟಿಟಿ ವಾಹನ ಪ್ರವಾಸಕ್ಕೆಂದು ಬರುತ್ತಿತ್ತು.

ಗಂಭೀರವಾಗಿ ಗಾಯಗೊಂಡ ಕೇರಳ ಮೂಲದ 7 ಪ್ರವಾಸಿಗರನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಚಿಕ್ಕಮಗಳೂರು ಜಿಲ್ಲೆಯ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ