ಸಿಎಂ ಬಸವರಾಜ ಬೊಮ್ಮಾಯಿ ಅವರು ನಿರೀಕ್ಷೆಯಂತೆ ಶಿಗ್ಗಾಂವಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಹೊರಬಿದ್ದಿದ್ದು, ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ( Shiggaon Assembly Constituency) ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಸಿಎಂ ಸ್ಪರ್ಧೆ ಮಾಡಿದ್ದರು.
ಈ ಮೂಲಕ ನಾಲ್ಕನೇ ಬಾರಿ ಗೆಲುವು ಸಾಧಿಸಿದ್ದಾರೆ. ಹಿಂದೆ ನಡೆದಿದ್ದ ಚುನಾವಣೆಯಲ್ಲಿ 83,868 ಮತಗಳನ್ನ ಪಡೆದು ಗೆಲುವನ್ನ ಸಾಧಿಸಿ, ರಾಜ್ಯದ ಮುಖ್ಯಮಂತ್ರಿ ಗದ್ದುಗೆ ಏರಿದ್ದರು. ಕಾಂಗ್ರೆಸ್ನಿಂದ ಯಾಸೀರ್ ಅಹ್ಮದ್ ಖಾನ್ ಪಠಾಣ್ ಸ್ಪರ್ಧಿಸಿದ್ದರು. ಈ ಹಿಂದೆ ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಸೈಯದ್ ಅಜೀಮ್ ಪೀರ್ ಖಾದ್ರಿ 74,603 ಮತವನ್ನ ಪಡೆದಿದ್ದು, 9,265 ಮತಗಳ ಅಂತರದಿಂದ ಸೋತಿದ್ದರು. ಜೆಡಿಎಸ್ನಿಂದ ಶಶಿಧರ ಯಲಿಗಾರ ಸ್ಪರ್ಧೆ ಮಾಡಿದ್ದರು.