ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದ್ದು, ಬಿಜೆಪಿ ಹಿನ್ನಡೆ ಕಂಡಿದೆ. ಈ ಕುರಿತು ಸ್ಪಷ್ಟನೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಚುನಾವಣೆಯಲ್ಲಿ ಪಕ್ಷಕ್ಕೆ ಆಗಿರುವ ಹಿನ್ನಡೆಯನ್ನು ಹಾಗೂ ಹಾಗೂ ಜನಾದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
ಸಂಪೂರ್ಣ ಚುನಾವಣಾ ಫಲಿತಾಂಶ ಹೊರ ಬಿದ್ದ ನಂತರ ಅವಲೋಕನ ಮಾಡಲಿದ್ದೇವೆ. ರಾಜ್ಯದ ಜನ ಕೊಟ್ಟ ಜನಾದೇಶವನ್ನು ನಾವು ಒಪ್ಪಿಕೊಳ್ಳುತ್ತೇವೆ. ಇನ್ನೂ ಮುಂಬರುವಂತಹ ಲೋಕಸಭಾ ಚುನಾವಣೆಯಲ್ಲಿ ಪಕ್ಷವು ಉತ್ತಮ ಪ್ರದರ್ಶನ ನೀಡಲಿದೆ ಎಂದು ಆತ್ಮವಿಶ್ವಾಸವನ್ನು ವ್ಯಕ್ತಪಡಿಸಿದ್ದರು.