ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ (Karnataka Election)ಯಲ್ಲಿ ಮತದಾರರು ನೀಡಿದ ತೀರ್ಪನ್ನು ಸ್ವಾಗತಿಸುತ್ತೇವೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa) ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಸೋಲು- ಗೆಲುವು ಹೊಸದೇನು ಅಲ್ಲ. ಎರಡು ಸ್ಥಾನದಿಂದ ಆರಂಭಿಸಿ ಸ್ವಂತ ಬಲದಿಂದ ಸರ್ಕಾರ ಮಾಡಲಾಗಿತ್ತು. ಈ ಸೋಲಿನಿಂದ ಕಾರ್ಯಕರ್ತರು ಧೃತಿಗೆಡಬೇಕಿಲ್ಲ. ಅಭಿವೃದ್ಧಿ ಪರ ಆಡಳಿತ ನೀಡಿದ್ದೇವೆ. ಆದರೂ ಸೋಲಾಗಿದೆ, ಪರಾಮರ್ಶೆ, ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ. ರಾಜ್ಯದ ಜನತೆಗೆ ಧನ್ಯವಾದ ಹೇಳುತ್ತೇನೆ. ರಾಜ್ಯದ ಅಭಿವೃದ್ಧಿಗೆ ಸಹಕಾರ ಇರಲಿದೆ. ಕಾಂಗ್ರೆಸ್‍ನವರು ಕೊಟ್ಟಿರುವ ಭರವಸೆಗಳನ್ನು ಈಡೇರಿಸಬೇಕು ಎಂದು ಹೇಳಿದ್ದಾರೆ.
ವಿಧಾನಸಭೆ ಚುನಾವಣೆಗೂ ಹಾಗೂ ಲೋಕಸಭೆ ಚುನಾವಣೆಗೂ ಯಾವುದೇ ಸಂಬಂಧ ಇಲ್ಲ. ರಾಜ್ಯದ ಜನ ಕೊಟ್ಟ ತೀರ್ಪನ್ನು ಗೌರವದಿಂದ ಸ್ವೀಕರಿಸುತ್ತೇವೆ. ನಾವು ಹಿಂದೆ 25 ಲೋಕಸಭೆ ಕ್ಷೇತ್ರಗಳನ್ನು ಗೆದ್ದಿದ್ದೇವು. ಈ ಬಾರಿಯೂ ಅಷ್ಟೇ ಗೆಲ್ಲುತ್ತೇವೆ. ಮೋದಿ ಅವರು ಮತ್ತೆ ಪ್ರಧಾನಿಯಾಗುತ್ತಾರೆ ಎದು ಹೇಳಿದ್ದಾರೆ.