Bangalore: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Election) ಜನಾದೇಶ ಹೊರ ಬೀಳಲಿದ್ದು, ಈ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಕರ್ನಾಟಕ ವಿಧಾನಸಭೆ ಚನಾವಣೆಯ ಫಲಿತಾಂಶಕ್ಕೆ (Result) ಕ್ಷಣಗಣನೆ ಆರಂಭವಾಗಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಮತ (Vote) ಎಣಿಕೆ ಶುರುವಾಗಲಿದೆ. 224 ಕ್ಷೇತ್ರಗಳ ಒಟ್ಟು 2,631 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಕೇಂದ್ರಗಳಲ್ಲಿ ಎಲ್ಲ ಸಿದ್ಧತೆ ನಡೆದಿದೆ. ಫಲಿತಾಂಶದ ಹಿನ್ನೆಲೆಯಲ್ಲಿ ಏಜೆಂಟರ್‌ಗಳು ಮತಕೇಂದ್ರಗಳತ್ತ ಬರುತ್ತಿದ್ದಾರೆ.
ಎಂಟು ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಯಾರಿಗೆ ಅಧಿಕಾರ ಎನ್ನುವುದರ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ. ಸ್ಪಷ್ಟ ಜನಾದೇಶವೋ. ಮತ್ತೆ ಅತಂತ್ರ ಫಲಿತಾಂಶವೋ ಎಂಬುದು ಗೊತ್ತಾಗಲಿದೆ. ಮೊದಲು ಅಂಚೆ ಮತ, ನಂತರ ಮನೆ ಮತ ಅದಾದ ಬಳಿಕ ಕೊನೆಗೆ ಇವಿಎಂಗಳ ಮತಗಳನ್ನು ಎಣಿಕೆ ಮಾಡಲಾಗುತ್ತದೆ. ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.