Kornersite

Bengaluru Just In Karnataka Politics State

Karnataka Assembly Election: ಅಪ್ಪ- ಮಗ, ಅಪ್ಪ – ಮಗಳನ್ನು ಒಟ್ಟಿಗೆ ವಿಧಾನಸಭೆಗೆ ಕಳುಹಿಸಿದ ಮತದಾರ!

ಬೆಂಗಳೂರು : ವಿಧಾನಸಭೆ ಚುನಾವಣೆ (Assembly Election 2023) ಫಲಿತಾಂಶ ಹೊರ ಬಿದ್ದಿದ್ದು, ಈ ಬಾರಿ ನಿರೀಕ್ಷೆಯನ್ನೂ ಮೀರಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಜಯ ಗಳಿಸಿದೆ.

ಈ ಬಾರಿ ಹೊಸ ಪ್ರಯೋಗಗಳಿಗೆ ತಕ್ಕ ಉತ್ತರ ನೀಡಿರುವ ಮತದಾರ, ತಂದೆ (Dad) ಮಗ (Sons) ಅಥವಾ ತಂದೆ ಮಗಳಿಗೆ ಅಂದರೆ, ಒಂದೇ ಕುಟುಂಬದಲ್ಲಿನ ಇಬ್ಬರನ್ನು ಕೂಡ ಹಲವು ಕ್ಷೇತ್ರಗಳಲ್ಲಿ ವಿಧಾನಸಭೆಗೆ ಕಳುಹಿಸಿದ್ದಾನೆ.

ಅರಕಲಗೂಡಿನಲ್ಲಿ ಜೆಡಿಎಸ್‌ (JDS) ನಿಂದ ಎ. ಮಂಜು ಜಯಗಳಿಸಿದ್ದರೆ, ಮಡಿಕೇರಿಯಲ್ಲಿ ಅವರ ಮಗ ಕಾಂಗ್ರೆಸ್ (Congress) ನಿಂದ ಡಾ. ಮಂಥರ್ ಗೌಡ ಭರ್ಜರಿ ಜಯ ದಾಖಲಿಸಿ, ಬಿಜೆಪಿ ಕೋಟೆಯನ್ನು ಛಿದ್ರ ಮಾಡಿ ವಿಧಾನಸಭೆ ಪ್ರವೇಶಿಸಿದ್ದಾರೆ.

ಶಾಸಕ ಜಿ.ಟಿ. ದೇವೇಗೌಡ ಅವರು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಜಯ ಸಾಧಿಸಿದರೆ, ಅವರ ಮಗ ಜಿ.ಡಿ. ಹರೀಶ್ ಗೌಡ ಅವರು ಜೆಡಿಎಸ್ ನಿಂದ ಹುಣಸೂರು ಕ್ಷೇತ್ರದಲ್ಲಿ ಗೆದ್ದು ಬೀಗಿದ್ದಾರೆ. ಬೆಂಗಳೂರಿನ ವಿಜಯನಗರ ಕ್ಷೇತ್ರದಿಂದ ಎಂ. ಕೃಷ್ಣಪ್ಪ ಅವರು ಕಾಂಗ್ರೆಸ್‌ ನಿಂದ ಮತ್ತು ಅವರ ಮಗ ಪ್ರಿಯಾ ಕೃಷ್ಣ ಅವರು ಗೋವಿಂದರಾಜ ನಗರದಿಂದ ಗೆದ್ದಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಿರುವ ಹಿರಿಯ ರಾಜಕಾರಣಿ ಹಾಗೂ ಕಾಂಗ್ರೆಸ್ ನ ಹಿರಿಯ ನಾಯಕ 91 ವರ್ಷದ ಶಾಮನೂರು ಶಿವಶಂಕರಪ್ಪ ಅವರು ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಮತ್ತು ದಾವಣಗೆರೆ ಉತ್ತರ ಕ್ಷೇತ್ರದಿಂದ ಅವರ ಮಗ ಎಸ್‌.ಎಸ್‌. ಮಲ್ಲಿಕಾರ್ಜುನ ಅವರು ಜಯಗಳಿಸಿದ್ದಾರೆ. ಇಬ್ಬರೂ ಕೂಡ ಕಾಂಗ್ರೆಸ್‌ ನಿಂದ ಗೆಲುವು ಸಾಧಿಸಿದ್ದಾರೆ.

ಬಿಟಿಎಂ ಲೇಔಟ್‌ ನಿಂದ ರಾಮಲಿಂಗ ರೆಡ್ಡಿ ಅವರು ಕಾಂಗ್ರೆಸ್‌ ನಿಂದ ಜಯಗಳಿಸಿದ್ದರೆ ಅವರ ಮಗಳ ಸೌಮ್ಯ ರೆಡ್ಡಿ ಅವರು ಕಾಂಗ್ರೆಸ್‌ ನಿಂದ ಅತ್ಯಲ್ಪ 160 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಆದರೆ, ಜೆಡಿಎಸ್‌ ಪಕ್ಷದ ನಾಯಕ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಅತ್ಯಲ್ಪ ಮತಗಳ ಅಂತರದಲ್ಲಿ ಜಯ ಸಾಧಿಸಿದ್ದರೆ, ಅವರ ಮಗ ನಿಖಿಲ್ ಕುಮಾರಸ್ವಾಮಿ ಭಾರೀ ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು