ವಿಧಾನಸಭೆ ಚುನಾವಣೆಯಲ್ಲಿ (Assembly Election 2023) ಕಾಂಗ್ರೆಸ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದು, 136 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ. ಉಳಿದಂತೆ, ಬಿಜೆಪಿ 65, ಜೆಡಿಎಸ್ 19 ಹಾಗೂ ಪಕ್ಷೇತರ ಅಭ್ಯರ್ಥಿಗಳು 4 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ. ಈ ವಿಷಯವಾಗಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ವಿಜಯೋತ್ಸವ ಆಚರಿಸಲಾಯಿತು.
ಈ ಕುರಿತು ಪ್ರತಿಕ್ರಿಯೆ ನೀಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡಿರುವ ರಣದೀಪ್ ಸಿಂಗ್ ಸುರ್ಜೆವಾಲಾ (Randeep Singh Surjewala) ಅವರು, ಕಾಂಗ್ರೆಸ್ ಪಕ್ಷವು 136 ಕ್ಷೇತ್ರಗಳನ್ನು ಗೆದ್ದಿಲ್ಲ. ನಾವು ಗೆದ್ದಿರುವುದು 138 ಕ್ಷೇತ್ರಗಳು ಎಂದು ಹೇಳಿದ್ದಾರೆ.
ಮೇಲುಕೋಟೆಯ ಸವೋರ್ದಯ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ, ಗೌರಿಬಿದನೂರಿನ ಪಕ್ಷೇತರ ಅಭ್ಯರ್ಥಿ ಕೆ.ಎಚ್. ಪುಟ್ಟಸ್ವಾಮಯ್ಯ ಕಾಂಗ್ರೆಸ್ ಗೆ ಬೆಂಬಲ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.