NewDelhi : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಶುಭಾಶಯ ತಿಳಿಸಿದ್ದಾರೆ.
ಕಾಂಗ್ರೆಸ್ (Congress) ನಾಯಕರಿಗೆ ಪ್ರಧಾನಿ ಶುಭ ಹಾರೈಸಿದ್ದು, ಅತ್ಯುತ್ತಮ ಆಡಳಿತ ನೀಡುವಂತೆ ಹಾರೈಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ಕರ್ನಾಟಕ ವಿಧಾನಸಭಾ (Assembly Election 2023) ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು. ಜನರ ಆಶೋತ್ತರಗಳನ್ನು ಅವರು ಈಡೇರಿಸಲಿ. ಅವರಿಗೆ ಹಾರೈಸುತ್ತೇನೆ’ ಎಂದು ಹೇಳಿದಾರೆ. ಆದರೆ, ಬಿಜೆಪಿ ಸೋಲಿನ ಬಗ್ಗೆ ಪ್ರಧಾನಿ ಒಂದಕ್ಷರ ಕೂಡ ಬರೆಯದೇ ಇರುವುದು ಅಚ್ಚರಿ ತಂದಿದೆ.
ಬಿಜೆಪಿ ನಾಯಕರು ಮತ್ತು ಸ್ವತಃ ರಾಜ್ಯದ ಬಿಜೆಪಿ ಅಧ್ಯಕ್ಷರು ಸೋಲಿನ ಹೊಣೆಯನ್ನು ಹೊತ್ತುಕೊಂಡಿದ್ದಾರೆ. ಸೋಲಿನ ಬಗ್ಗೆ ವಿಮರ್ಶೆ ಮಾಡಿಕೊಂಡು, ಮುಂದಿನ ಲೋಕಸಭೆ ಚುನಾವಣೆಗೆ ತಯಾರಿ ಆಗುವುದಾಗಿ ಮಾತನಾಡಿದ್ದಾರೆ. ಅಲ್ಲದೇ, ಜನರ ಆದೇಶ ಒಪ್ಪಿಕೊಳ್ಳುವುದಾಗಿ ಹೇಳಿದ್ದಾರೆ.