Kornersite

Bengaluru Just In Karnataka Politics State

Shriramulu: ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಮಕಾಡೆ ಮಲಗಿದ ಶ್ರೀರಾಮುಲು!

ಬಳ್ಳಾರಿ : ಮಾಜಿ ಸಚಿವ ಬಿ. ಶ್ರೀರಾಮುಲುಗೆ ಮುಖಭಂಗವಾಗಿದೆ. ಬಳ್ಳಾರಿ ಗ್ರಾಮೀಣ ಭಾಗದ ಜನರು ಶ್ರೀರಾಮುಲು ಅವರಿಗೆ ಸೋಲುನಿಸಿದ್ದಾರೆ.

ಸತತ ನಾಲ್ಕು ಬಾರಿ ಶಾಸಕ ಹಾಗೂ ಒಮ್ಮೆ ಸಂಸದರಾಗಿ ಆಯ್ಕೆಯಾಗಿದ್ದ ಶ್ರೀರಾಮುಲು (Sriramulu) ಬಳ್ಳಾರಿ (Ballary) ಗ್ರಾಮೀಣದಲ್ಲಿ ಹೀನಾಯ ಸೋಲನುಭವಿಸಿದ್ದಾರೆ. ಹಿಂದಿನ ಚುನಾವಣೆಯಲ್ಲಿ ಮೊಳಕಾಲ್ಮೂರು, ಬಾದಾಮಿ ಎರಡೂ ಕಡೆ ಸ್ಪರ್ಧಿಸಿ, ಮೊಳಕಾಲ್ಮೂರಿನಲ್ಲಿ ಜಯ ಸಾಧಿಸಿದ್ದ ಬಿಜೆಪಿಯ ಮುಂಚೂಣಿ ನಾಯಕ ಬಿ. ಶ್ರೀರಾಮುಲು ಈ ಬಾರಿ ಹೀನಾಯ ಸೋಲು ಅನುಭವಿಸಿದ್ದಾರೆ. ಬಳ್ಳಾರಿ ಗ್ರಾಮಾಂತರದಲ್ಲಿ ಶ್ರೀರಾಮುಲು ವಿರುದ್ಧ ಕಾಂಗ್ರೆಸ್‍ನ (Congress) ಹಾಲಿ ಶಾಸಕ ನಾಗೇಂದ್ರಗೆ ಭರ್ಜರಿ ಜಯ ಸಿಕ್ಕಿದೆ.

ಈ ಬಾರಿ ಕ್ಷೇತ್ರದಲ್ಲಿ ಒಟ್ಟು 8 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಕ್ಷೇತ್ರದಲ್ಲಿ ಒಟ್ಟು 1,16,096 ಪುರುಷ ಮತದಾರರು, 1,22,181 ಮಹಿಳೆಯರು, 49 ಇತರ ಮತದಾರರು ಸೇರಿ ಒಟ್ಟು 2,38,326 ಮತದಾರರು ಮತದಾನದ ಹಕ್ಕು ಹೊಂದಿದ್ದರು. ಮೇ 10ರಂದು ನಡೆದಿದ್ದ ಮತದಾನದ ವೇಳೆ ಕ್ಷೇತ್ರದಲ್ಲಿ ಶೇ.76.09ರಷ್ಟು ಸಾಧಾರಣ ಮತದಾನ ನಡೆದಿತ್ತು.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು