ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್ ಮ್ಯಾಜಿಕ್ ನಂಬರ್ ದಾಟಿದ್ದು, ಸಿಎಂ ಸ್ಥಾನದಲ್ಲಿ ಮೇಲೆ ಕಣ್ಣಿಟ್ಟಿರುವ ಸಿದ್ದರಾಮಯ್ಯ ಅವರ ಮನೆಯಲ್ಲಿ ಸೂತಕದ ವಾತಾವರಣ ಮನೆ ಮಾಡಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರ ಭಾವ ನಿಧನರಾಗಿದ್ದಾರೆ. ಸಿದ್ದರಾಮಯ್ಯ ಅವರ ಸ್ವಂತ ಸಹೋದರಿ ಶಿವಮ್ಮ ಪತಿ ಸಾವನ್ನಪ್ಪಿದ್ದಾರೆ. ರಾಮೇಗೌಡ (69) ಸಾವನ್ನಪ್ಪಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ರಾಮೇಗೌಡ ತಮ್ಮ ಪತ್ನಿ, ಮೂವರು ಹೆಣ್ಣು ಮಕ್ಕಳು, ಓರ್ವ ಮಗನನ್ನು ಅಗಲಿದ್ದಾರೆ. ಸಂಜೆ ವೇಳೆಗೆ ಸಿದ್ದರಾಮನಹುಂಡಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎನ್ನಲಾಗಿದೆ.